ಮಂಗಳೂರು: ಮೂಡಬಿದ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೂಡಬಿದ್ರೆಯ ಕಡಂದಲೆ ನಿವಾಸಿ ದಯಾನಂದ ಪೂಜಾರಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಈತ ಮುಂಬೈನಲ್ಲಿ ಉದ್ಯೋಗ ಮಾಡುತ್ತಿದ್ದ ಈತ ನಿನ್ನೆ ರಾತ್ರಿ ಊರಿಗೆ ಬಂದಿದ್ದ. ಹೊರ ರಾಜ್ಯದಿಂದ ಬಂದ ಕಾರಣ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ಒಂದು ವೇಳೆ ಕೋವಿಡ್ 19 ದೃಢವಾದರೆ ಮುಂದಿನ ಜೀವನೋಪಾಯ ಕಷ್ಟವೆಂಬ ಭಯದಿಂದ ದಯಾನಂದ ನೇಣು ಹಾಕಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.