ETV Bharat / state

ನಾಲ್ಕೂವರೆ ತಿಂಗಳ ಮಗು ಕೊಂದು ತಾಯಿ ಆತ್ಮಹತ್ಯೆ - ಮಂಗಳೂರು ಆತ್ಮಹತ್ಯೆ ಪ್ರಕರಣ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಗುವನ್ನು ಕೊಂದು ತಾಯಿ ಆತ್ಮಹತ್ಯೆ
ಮಗುವನ್ನು ಕೊಂದು ತಾಯಿ ಆತ್ಮಹತ್ಯೆ
author img

By ETV Bharat Karnataka Team

Published : Dec 2, 2023, 9:20 PM IST

ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಮಗ್​ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಗುಜ್ಜರಕೆರೆಯ ಮುಹಮ್ಮದ್ ಉನೈಸ್ ಎಂಬವರ ಪತ್ನಿ ಫಾತಿಮಾ ರುಕಿಯಾ (23) ಮತ್ತು ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಮೃತರು ಎಂದು ಗುರುತಿಸಲಾಗಿದೆ.

ಫಾತಿಮಾ ರುಕಿಯಾ ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರನ್ನು ವಿವಾಹವಾಗಿದ್ದರು. 2023 ಜುಲೈ 7 ರಂದು ಹೆರಿಗೆಯಾಗಿತ್ತು. ಇವರಿಗೆ ಅಬ್ದುಲ್ಲಾ ಹೂದ್ ಎಂಬ ಸುಮಾರು 4 1/2 ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು,ಫಾತಿಮಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ಮಾನಸಿಕವಾಗಿ ನೊಂದಿದ್ದ ಅವರಿಗೆ ಮಂಗಳೂರಿನ ಅರೋಗ್ಯ ಕ್ಲಿನಿಕ್​ನಲ್ಲಿ ಮಾನಸಿಕ ವೈದ್ಯರಾದ ಡಾ. ಸುಪ್ರಿಯಾ ಅವರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಫ್ಲಾಟ್ ನಂಬರ್ 507ರ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಪ್ರಕರಣಗಳು, ಒಂದೇ ಕಟುಂಬದ ಐವರು ಆತ್ಮಹತ್ಯೆ: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ನಡೆದಿತ್ತು. ಗರೀಬ್ ಸಾಬ್ ಎಂಬುವರು ಕುಟುಂಬ ಸಮೇತ ಸಾವಿನ ಹಾದಿ ಹಿಡಿದಿದ್ದಾರೆ. ಗರೀಬ್‌ಸಾಬ್‌, ಸುಮಯಾ ದಂಪತಿಯು ಮಕ್ಕಳಾದ ಹಾಜೀರಾ, ಮಹ್ಮದ್ ಶುಭಾನ್ ಮತ್ತು ಮಹ್ಮದ್ ಮುನೀರ್ ನನ್ನು ಸಾಯಿಸಿ ಬಳಿಕ ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​​ನೋಟ್: ನಮಗೆ ಸಾಲ ಹೆಚ್ಚಾಗಿದೆ, ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ. ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ. ಊಟ ಮಾಡೋಕು ಕಷ್ಟ ಆಗಿದೆ. ಜೊತೆಗೆ ಮೂರು ತಿಂಗಳ ಮನೆ ಬಾಡಿಗೆ ಕೊಡುವುದಿದ್ದು, ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ಬರೆಯಲಾಗಿತ್ತು.

ಇದನ್ನೂ ಓದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆಗೆ ಶರಣು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.