ETV Bharat / state

ದ.ಕ ಜಿಲ್ಲೆಯಲ್ಲಿ ಕೊರೊನಾದಿಂದ ವ್ಯಕ್ತಿ ಸಾವು

author img

By

Published : Mar 11, 2021, 12:49 PM IST

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Mangaluru
ಕೊರೊನಾದಿಂದ ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ತಿಂಗಳ ಬಳಿಕ ಮತ್ತೆ ಕೊರೊನಾ ಸೋಂಕಿನಿಂದ ಒಬ್ಬ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ನಾಲ್ಕು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರು ಅನ್ನನಾಳದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ಅವರಿಗೆ ಕೊರೊನಾ ಇರುವುದು ಪತ್ತೆಯಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಕೊರೊನಾ ಸೋಂಕಿನಿಂದ ಸಾವಿನ ಪ್ರಕರಣ ಪ್ರತಿದಿನ ವರದಿಯಾಗುತ್ತಿತ್ತು. ನಿತ್ಯ ಹತ್ತು ಮಂದಿಯಷ್ಟು ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದರು. ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಬಳಿಕ ಕೊರೊನಾ‌ ಪ್ರಕರಣ ಇಳಿಮುಖವಾಗಿ ಸಾವು ಸಂಭವಿಸುವುದು ನಿಂತು ಹೋಗಿ ನೆಮ್ಮದಿ ಮೂಡಿಸಿತ್ತು. ಆದರೆ ಹಲವು ತಿಂಗಳ ಬಳಿಕ ಮತ್ತೊಮ್ಮೆ ಕೊರೊನಾ ರೋಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಈವರೆಗೆ 34,619 ಮಂದಿಗೆ ಕೊರೊನಾ ದೃಢಪಟ್ಟಿದ್ದು ಇದರಲ್ಲಿ 218 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.