ETV Bharat / state

ಚೀನಾದಿಂದ ಕಡಬಕ್ಕೆ ಬಂದ ವ್ಯಕ್ತಿಗೆ ಕೊರೊನಾ ಇಲ್ಲ: ವೈದ್ಯಾಧಿಕಾರಿ ಸ್ಪಷ್ಟನೆ

ಚೀನಾಕ್ಕೆ ತೆರಳಿದ್ದ ಕಡಬದ ವ್ಯಕ್ತಿಯೋರ್ವರು ಎರಡು ದಿನಗಳ ಹಿಂದೆ ತಾಯ್ನಾಡಿಗೆ ಮರಳಿದ್ದು, ಅವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Dr. Trimurti clarified
ಕಡಬಕ್ಕೆ ಬಂದ ವ್ಯಕ್ತಿಗೆ ಕೊರೊನಾ ಇಲ್ಲ: ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಸ್ಪಷ್ಟನೆ
author img

By

Published : Mar 11, 2020, 3:17 PM IST

ಕಡಬ/ ದಕ್ಷಿಣಕನ್ನಡ: ಚೀನಾದಲ್ಲಿ ಹುಟ್ಟು ಪಡೆದ ಕೊರೊನಾ ವೈರಸ್‌ ಜಗತ್ತಿನ ವಿವಿಧೆಡೆ ವ್ಯಾಪಿಸಿರುವ ನಡುವೆಯೇ ಚೀನಾಕ್ಕೆ ತೆರಳಿದ್ದ ವ್ಯಕ್ತಿಯೋರ್ವರು ಕಡಬಕ್ಕೆ ಆಗಮಿಸಿದ್ದರಿಂದ ಕಡಬದಲ್ಲಿ ಜನರು ಸ್ವಲ್ಪ ಮಟ್ಟಿಗೆ ಆತಂಕಗೊಂಡಿದ್ದಾರೆ.

ವೈದ್ಯಾಧಿಕಾರಿ ಡಾ. ತ್ರಿಮೂರ್ತಿ

ಚೀನಾಕ್ಕೆ ತೆರಳಿದ್ದ ಕಡಬದ ವ್ಯಕ್ತಿಯೋರ್ವರು ಎರಡು ದಿನಗಳ ಹಿಂದೆ ತಾಯ್ನಾಡಿಗೆ ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ತಪಾಸಣೆಗೊಳಪಡಿಸಿ ಯಾವುದೇ ಕೊರೊನಾ ವೈರಸ್ ಲಕ್ಷಣಗಳು ಕಾಣದ ಹಿನ್ನೆಲೆ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ ಅವರ ಮನೆಯ ಪರಿಸರದಲ್ಲಿ ಕೆಲವರು ಆತಂಕ ವ್ಯಕ್ತಪಡಿಸಿದ್ದರಿಂದ ಇಂದು ಪುನಃ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮನೆಗೆ ಹಿಂತಿರುಗಿದ್ದಾರೆ.

ಕೊರೊನಾ ವೈರಸ್ ಲಕ್ಷಣಗಳು ಕಾಣದ ಹಿನ್ನೆಲೆಯಲ್ಲಿ ಮನೆಗೆ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.