ಮಂಗಳೂರು/ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ಮನೋಜ್(43) ಆತ್ಮಹತ್ಯೆ ಶರಣಾದ ವ್ಯಕ್ತಿ. ಈತ ಕುಂದಾಪುರ ಮೂಲದವರಾಗಿದ್ದು, ಕಿಡ್ನಿ ಹಾಗೂ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಯ ನೋವನ್ನು ಸಹಿಸಿಕೊಳ್ಳಲಾಗದೆ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.