ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ ಗೌಪ್ಯ ಮಾಹಿತಿ, ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ದೂರು ನೀಡಲು ಮಂಗಳೂರು ಲೋಕಾಯುಕ್ತ ವಿಶೇಷ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ಕೆ. ಅವರು ವಿಶೇಷ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದ್ದಾರೆ.
ಸಾರ್ವಜನಿಕರು ಲೋಕಾಯುಕ್ತ ಸಂಸ್ಥೆಯ ಕಾರ್ಯ ನಿರ್ವಹಣೆಯ ಬಗ್ಗೆ ತಿಳಿದುಕೊಳ್ಳಲು, ಭ್ರಷ್ಟಾಚಾರದ ಸಂಬಂಧ ದೂರುಗಳಿದ್ದಲ್ಲಿ ಹಾಗೂ ಗೌಪ್ಯ ಮಾಹಿತಿಗಳಿದ್ದಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕರ ಕಚೇರಿಯ ದೂರವಾಣಿ ಸಂಖ್ಯೆ 0824-2950997, 0824-2427237ಕ್ಕೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.
ದ.ಕ.ಜಿಲ್ಲೆಯ ಸಾರ್ವಜನಿಕರು ಪ್ರತೀ ತಿಂಗಳ ಎರಡನೇ ಶುಕ್ರವಾರ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ (ರಜಾ ದಿನಗಳನ್ನು ಹೊರತು ಪಡಿಸಿ), ಉಡುಪಿ ಜಿಲ್ಲೆಯ ಸಾರ್ವಜನಿಕರು ಪ್ರತಿ ತಿಂಗಳ 4ನೇ ಶುಕ್ರವಾರ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ (ರಜಾ ದಿನಗಳನ್ನು ಹೊರತು ಪಡಿಸಿ) ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ದೂರು ನೀಡಬಹುದು ಎಂದು ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ಕೆ ತಿಳಿಸಿದ್ದಾರೆ.
ಇದನ್ನೂ ಓದಿ: ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯ: ಸಿಎಂ ಬೊಮ್ಮಾಯಿ