ETV Bharat / state

ತಾವರೆಗಿಡ ಹಾಕಲು ಹೋದ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವು - ನೆಲ್ಯಾಡಿಯಲ್ಲಿ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವು,

ತಾವರೆಗಿಡ ಹಾಕಲು ಹೋದ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದೆ.

student drowns, student drowns in lake, student drowns in lake in Nellyadi, Nellyadi news, ವಿದ್ಯಾರ್ಥಿನಿ ಸಾವು, ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವು, ನೆಲ್ಯಾಡಿಯಲ್ಲಿ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವು, ನೆಲ್ಯಾಡಿ ಸುದ್ದಿ,
ತಾವರೆಗಿಡ ಹಾಕಲು ಹೋದ ವಿದ್ಯಾರ್ಥಿನಿ ಕೆರೆಯಲ್ಲಿ ಮುಳುಗಿ ಸಾವು
author img

By

Published : Nov 15, 2021, 11:20 AM IST

ನೆಲ್ಯಾಡಿ: ತಾವರೆಗಿಡ ಹಾಕಲು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಕಡಬ ತಾಲೂಕಿನ ಕೊಣಾಲು ಗ್ರಾಮದ ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಗಳ ಪುತ್ರಿ ಶ್ರೇಯಾ (18) ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡಗಳನ್ನು ಹಾಕಲೆಂದು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸಮಯ ಕಳೆದ್ರೂ ಶ್ರೇಯಾ ಮನಗೆ ಹಿಂದುರಗದ ಹಿನ್ನೆಲೆ ಕುಟುಂಬಸ್ಥರು ಕೆರೆಯ ಕಡೆ ಹೋಗಿದ್ದ ನೋಡಿದ್ದಾರೆ. ಅಷ್ಟೋತ್ತಿಗಾಗಲೇ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.