ETV Bharat / state

ಸುಳ್ಯ : ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ.. ಗರ್ಭಿಣಿಯಾದ ವಿದ್ಯಾರ್ಥಿನಿ - ಈಟಿವಿ ಭಾರತ ಕನ್ನಡ

ಯುವಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

a-student-was-sexually-harassed-in-sulya
ಸುಳ್ಯ : ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ.. ಗರ್ಭಿಣಿಯಾದ ವಿದ್ಯಾರ್ಥಿನಿ
author img

By

Published : Sep 27, 2022, 8:53 PM IST

ಸುಳ್ಯ (ದಕ್ಷಿಣಕನ್ನಡ): ವಾಟ್ಸ್​ಆ್ಯಪ್​ ಗ್ರೂಪಲ್ಲಿ ಪರಿಚಯವಾದ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ, ಅವಳು ಗರ್ಭಿಣಿಯಾಗಿರುವ ಘಟನೆ ಸುಳ್ಯ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆಗಾಗ ಹೊಟ್ಟೆನೋವು ಆಗುತ್ತಿದೆ ಎಂದು ಮನೆಯವರಿಗೆ ಹೇಳಿದ್ದಳು. ಈ ಬಗ್ಗೆ ಇಂದು ವೈದ್ಯರಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ವಾಟ್ಸ್​ಆ್ಯಪ್​ ಗ್ರೂಪ್ ಒಂದರಲ್ಲಿ ಪರಿಚಯವಾದ ಇಲ್ಲಿನ ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತ ನಾಲ್ಕು ತಿಂಗಳ ಹಿಂದೆ 30-06-2022ರಂದು ತನ್ನನ್ನು ಇಲ್ಲಿನ ಕಾಲೇಜೊಂದರ ಬಳಿ ಇರುವ ಆತನ ಸ್ನೇಹಿತನ ರೂಮಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರ ತಿಳಿಸಿದ್ದಾಳೆ.

ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಯುವಕನ ವಿರುದ್ಧ 376 ಐಪಿಸಿ ಮತ್ತು ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಳಲಿ ಮಸೀದಿ ವಿಚಾರ.. ಅ.17ಕ್ಕೆ ತೀರ್ಪು ಪ್ರಕಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.