ಮಂಗಳೂರು: ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ಮೂಲತಃ ಬೆಂಗಳೂರು ನಗರದ ಕುಮಾರಸ್ವಾಮಿ ಬಡಾವಣೆ ನಿವಾಸಿ ಭರತ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಈತ ವಾಸವಿದ್ದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಹಾಕಿಕೊಳ್ಳುವುದಕ್ಕೂ ಮೊದಲು ಆತ ತನ್ನ ತಾಯಿಗೆ ಕರೆ ಮಾಡಿದ್ದಾನೆ. ಆದರೆ, ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಅವರ ವಾಟ್ಸ್ಆಪ್ ನಂಬರ್ಗೆ 'ಕಾಲೇಜಿನ ಪ್ರಾಧ್ಯಾಪಕರೊಬ್ಬರು ತಾನು ಮಾಡಿರುವ ಪ್ರಾಜೆಕ್ಟ್ ವರ್ಕ್ ಸರಿಯಿಲ್ಲವೆಂದು ಸಹಿ ಮಾಡದೆ ಕಿರಿ ಕಿರಿ ಮಾಡಿದ್ದಾರೆ. ಅಲ್ಲದೇ, ಮನಸ್ಸಿಗೆ ನೋವಾಗುವಂತೆ ವರ್ತಿಸಿ, ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದ್ದರಿಂದ ನಾನು ಈ ಲೋಕವನ್ನು ತ್ಯಜಿಸುತ್ತಿದ್ದೇನೆ' ಎಂದು ಸಂದೇಶ ರವಾನಿಸಿದ್ದಾನೆ. ಆ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನಿಂದ ಮಂಗಳೂರಿಗೆ ಬಂದಿರುವ ಭರತ್ ಪೋಷಕರು, ತಮ್ಮ ಪುತ್ರನ ಸಾವಿಗೆ ಕಾರಣರಾಗಿರುವ ಪ್ರಾಧ್ಯಾಪಕ ಮತ್ತು ಕಾಲೇಜ್ ಅಧ್ಯಕ್ಷರ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಮನೆ ಸುತ್ತ ಕಂದಕ ತೋಡಿ ಮಾಲೀಕನಿಂದ ಕಿರುಕುಳ: ನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕಾರ್ಮಿಕ