ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕೊರೊನಾ ಲಾಕ್ ಡೌನ್ ಹಿನ್ನೆಲೆ ಊರಿಗೆ ಹೋಗಲಾಗದ ಕಾರ್ಮಿಕರಿಗೋಸ್ಕರ ನಿರ್ಮಿಸಿರುವ ತಾತ್ಕಾಲಿಕ ನಿರಾಶ್ರಿತರ ಕೇಂದ್ರಕ್ಕೆ ಪುತ್ತೂರು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ರಾಜ್ಯದ ವಿವಿಧ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಕಾರ್ಮಿಕರು ಸುಬ್ರಹ್ಮಣ್ಯ ಸುತ್ತಮುತ್ತ ಕೆಲಸಕ್ಕೆಂದು ಬಂದವರು ಲಾಕ್ ಡೌನ್ ಹಿನ್ನೆಲೆ ಊರಿಗೆ ಹೋಗಲು ಸಾರಿಗೆ ವ್ಯವಸ್ಥೆ ಇಲ್ಲದೆ ಸುಳ್ಯ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ರಸ್ತೆಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಹೀಗಾಗಿ, ಸುಮಾರು 52 ಮಂದಿ ಕಾರ್ಮಿಕರಿಗೆ ಸುಬ್ರಹ್ಮಣ್ಯದಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರ ನಿರ್ಮಿಸಲಾಗಿದೆ.
ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ ಪುತ್ತೂರು ಡಿವೈಎಸ್ಪಿ ದಿನಕರ್ ಶೆಟ್ಟಿ ಮತ್ತು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ನೇತೃತ್ವದ ಪೊಲೀಸರ ತಂಡ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಯಾವುದೇ ಸಮಸ್ಯೆಯಾದರೂ ನಮ್ಮ ಸಹಕಾರವಿದೆ ಎಂದು ನಿರಾಶ್ರಿತರಿಗೆ ಧೈರ್ಯ ತುಂಬಿದರು. ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ವೇಳೆ ಹಾಜರಿದ್ದರು.