ಕೊಣಾಜೆ(ದಕ್ಷಿಣ ಕನ್ನಡ): ಮದುವೆಯಾದ ಹದಿನೈದು ದಿನದಲ್ಲೇ ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಎಂಬಾ ಮಹಿಳೆ ಆತ್ಮಹತ್ಯೆಗೆ ಶರಣಾದವರು.
ಗಂಜಿಮಠ ಮೂಲದ ಸಂದೀಪ್ ಎಂಬುವವರ ಜೊತೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ಆಗಿದ್ದು, ಕಳೆದ ಆಗಸ್ಟ್ 21 ರಂದು ಅದ್ಧೂರಿಯಾಗಿ ವಿವಾಹವೂ ನಡೆದಿತ್ತು. ಸೆ.3 ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಅದೇ ದಿನ ರಶ್ಮಿ ಇಲಿಪಾಷಣ ಸೇವಿಸಿದ್ದರು ಎನ್ನಲಾಗ್ತಿದೆ.
ಬಳಿಕ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಸಾವಿಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ: ಆಡಿಯೋದಲ್ಲಿ ಮಾತನಾಡಿದ ಮಹಿಳೆಯರ ಬಂಧನಕ್ಕೆ ಭಕ್ತರ ಪಟ್ಟು