ETV Bharat / state

ಮಂಗಳೂರು: ಅಡಿಕೆ ಬೆಳೆಗೆ ಹನಿ ನೀರಾವರಿ ಅಳವಡಿಸಿ ಯಶಸ್ಸು ಕಂಡ‌ ಮಹಿಳೆ - ಹನಿ ನೀರಾವರಿ ಅಳವಡಿಕೆ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಡಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ. 90ರಷ್ಟು ಸಹಾಯಧನವನ್ನು ಇಲಾಖಾ ವತಿಯಿಂದ ನೀಡಲಾಗುತ್ತಿದೆ.

A woman who applied drip irrigation to a nut crop
ಅಡಿಕೆ ಬೆಳೆಗೆ ಹನಿ ನೀರಾವರಿ ಅಳವಡಿಸಿ ಯಶಸ್ಸು ಕಂಡ‌ ಮಹಿಳೆ
author img

By

Published : Sep 15, 2020, 8:32 AM IST

ಮಂಗಳೂರು: ನೈಸರ್ಗಿಕ ವರದಾನವಾಗಿ ಸಿಕ್ಕಿರುವ ನೀರನ್ನು ಮಿತವಾಗಿ ಬಳಸಿ ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಲು ರೈತರ ಆರ್ಥಿಕತೆಗೆ ಸಹಕಾರಿಯಾಗುವಂತೆ ಆಗಲು ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಡಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ. 90ರಷ್ಟು ಸಹಾಯಧನವನ್ನು ಇಲಾಖಾ ವತಿಯಿಂದ ನೀಡಲಾಗುತ್ತಿದೆ.

ಈ ಯೋಜನೆಯ ಮೂಲಕ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಚಂದ್ರಾವತಿಯ ನೀರಿನ ನಿರ್ವಹಣೆಗೆ ಹಾಗೂ ಕೂಲಿಯವರ ಸಮಸ್ಯೆಯಿಂದಾಗಿ ಬೇಸತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ನೀರಾವರಿಯ ಬಗ್ಗೆ ವಿಚಾರಿಸಿ, ಇಲಾಖೆಯ ಮಾರ್ಗದರ್ಶನದಲ್ಲಿ ಸುಮಾರು 0.3 ಹೆಕ್ಟೇರ್ ಅಡಿಕೆ ಪ್ರದೇಶಕ್ಕೆ ಹನಿ ನೀರಾವರಿ ಅಳವಡಿಸಿಕೊಂಡಿದ್ದಾರೆ. ಇವರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನವನ್ನು ಪಾವತಿಸಲಾಗಿದೆ. ಹನಿ ನೀರಾವರಿಯಲ್ಲಿ ಪ್ರತೀ ದಿನವೂ ಬೆಳೆಗೆ ಬೇಕಾದ ಪ್ರಮಾಣದಲ್ಲಿ ನೀರನ್ನು ಕೊಡುವುದರಿಂದ ತೇವಾಂಶವು ಹೆಚ್ಚಿನ ಬಿಗಿತವಿಲ್ಲದೆ ಬೆಳೆಗೆ ಒಂದೇ ಸಮನೆ ದೊರೆಯವುದರಿಂದ ಯಾವುದೇ ಕಾಲದಲ್ಲಿ ನೀರಿನ ಕೊರತೆ ಇಲ್ಲ, ಕಳೆಯ ಸಮಸ್ಯೆಯೂ ಇಲ್ಲ, ಕೂಲಿ ವೆಚ್ಚದಲ್ಲಿ ಉಳಿತಾಯವಾಗಿದೆ ಎಂದು ಚಂದ್ರಾವತಿ ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ ದ.ಕ. ಜಿಲ್ಲೆಯ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದ ವಿಷಯತಜ್ಞರು ರಿಶಲ್ ಡಿಸೋಜ - 8277806372 ಸಂಪರ್ಕಿಸಲು ಮಂಗಳೂರು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.