ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕಸಬಾ ಬೆಂಗ್ರೆ ನಿವಾಸಿ ಚಂದು ಹ್ಯಾರಿಸ್ (26) ಬಂಧಿತ ಆರೋಪಿ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಈತ ಸುಮಾರು 1 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಈತನ ಮೇಲೆ ಬರ್ಕೆ, ಸುರತ್ಕಲ್, ಮಂಗಳೂರು ಉತ್ತರ ಹಾಗೂ ಪಣಂಬೂರು ಪೊಲೀಸ್ ಠಾಣೆಗಳಲ್ಲಿ ವಾರೆಂಟ್ ಬಾಕಿ ಇತ್ತು.
ಆರೋಪಿಯನ್ನು ಕಸಬಾ ಬೆಂಗ್ರೆಯ ಕಿಲೇರಿಯಾ ಎಂಬಲ್ಲಿ ಬಂಧಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ಪ್ರಭಾರ ಇನ್ಸ್ಪೆಕ್ಟರ್ ಮೋಹನ್ ಕೊಟ್ಟಾರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐ ಉಮೇಶ್ಕುಮಾರ್ ಹಾಗೂ ಸಿಬ್ಬಂದಿ ರಾಧಾಕೃಷ್ಣ, ಶೈಲೇಂದ್ರ, ದಾದಾಸಾಬ್ ಪಾಲ್ಗೊಂಡಿದ್ದರು.