ಮಂಗಳೂರು : ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಓರ್ವ ಯುವಕ ಮೃತಪಟ್ಟ ಘಟನೆ ನಡೆದಿದೆ.
ಕೋಟೆಕಾರ್ ಬೀದಿ ನಿವಾಸಿ ಅನೀಶ್ (20) ಮೃತಪಟ್ಟ ಯುವಕ. ಮೃತ ಅನೀಶ್ ನಗರದ ಕೆಪಿಟಿಯಲ್ಲಿ ವ್ಯಾಸಂಗ ಮಾಡುತ್ತ, ವೆನ್ಲಾಕ್ ಆಸ್ಪತ್ರೆಯ ಕ್ಯಾಂಟೀನ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಕ್ಯಾಂಟೀನ್ ಕೆಲಸದಲ್ಲಿ ನಿರತನಾಗಿದ್ದ ವೇಳೆ ವಿದ್ಯುತ್ ಶಾರ್ಕ್ ಸರ್ಕ್ಯೂಟ್ನಿಂದ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಓದಿ : ಮಂಗಳೂರು: ಎರಡು ಪ್ರತ್ಯೇಕ ಜೂಜಾಟ ಪ್ರಕರಣ, 14 ಮಂದಿ ಅಂದರ್
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.