ಮಂಗಳೂರು: ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕರಾಗಿ ಇಂದು ಅಬ್ದುಲ್ ರವೂಫ್ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಪಕ್ಷವಾಗಿ ನಮ್ಮ ಸಂಪೂರ್ಣ ಸಹಕಾರ ಆಡಳಿತ ಪಕ್ಷಕ್ಕೆ ಇರಲಿದೆ. ಅಂತೆಯೇ ಅವರೂ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯಾವುದೇ ಗೊಂದಲ, ತಾರತಮ್ಯಗಳಿಲ್ಲದೆ ಅಧಿಕಾರ ನಡೆಸಬೇಕು ಎಂದರು.
ಮಂಗಳೂರು ಮಹಾನಗರ ಪಾಲಿಕೆಯ 21ನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವಲ್ಲಿ ಕಾಂಗ್ರೆಸ್ ಹಿನ್ನಡೆ ಕಂಡರೂ ಪ್ರತಿಪಕ್ಷವಾಗಿ ಅಧಿಕಾರ ವಹಿಸಿಕೊಂಡಿದೆ. ಪಕ್ಷ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸವಿರಿಸಿ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಿದ್ದಾರೆ. ನಾನು ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಮಂಗಳೂರು ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಅಬ್ದುಲ್ ರವೂಫ್ ಹೇಳಿದರು.