ಬಂಟ್ವಾಳ : ರಾಷ್ಟ್ರವ್ಯಾಪಿ ಡ್ರಗ್ಸ್ ದಂಧೆ ನಡೆಸುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಉಪ ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಂಚಾಲಕ ಹರ್ಷಿತ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ನಗರ ಸಹಕಾರ್ಯದರ್ಶಿಗಳಾದ ನಾಗರಾಜ್ ಶೆಣೈ, ಸಚಿನ್ ಹಾಗೂ ಗಗನ್, ಅನೀಶ್ ಚೇಳೂರು, ಸಂದೇಶ್, ಭರತ್ ಗಟ್ಟಿ ಹಾಗೂ ರಂಜಿತ್ ಸೇರಿ ಮುಂತಾದವರು ಉಪಸ್ಥಿತರಿದ್ದರು.