ETV Bharat / state

ಆರ್​​ಟಿಸಿ ತಿದ್ದುಪಡಿ ಮಾಡಲು ಲಂಚಕ್ಕೆ ಬೇಡಿಕೆ... ಉಪತಹಶೀಲ್ದಾರ್ ಎಸಿಬಿ ಬಲೆಗೆ - ಆರ್​​ಟಿಸಿ ತಿದ್ದುಪಡಿ ಮಾಡಲು ಲಂಚಕ್ಕೆ ಬೇಡಿಕೆ

ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್​ಟಿಸಿಯಲ್ಲಿ ತಿದ್ದುಪಡಿ ಮಾಡಿ ಕೊಡಲು ಉಪತಹಶೀಲ್ದಾರ್ 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವನ್ನು ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ..

deputy-tahsilda
ಉಪತಹಶೀಲ್ದಾರ್ ಎಸಿಬಿ ಬಲೆಗೆ
author img

By

Published : Nov 27, 2020, 10:55 PM IST

ಬಂಟ್ವಾಳ : ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ತಾಲೂಕು ಕಚೇರಿ ಮೇಲೆ ದಾಳಿ ನಡೆಸಿದ್ದು, ಕಾರ್ಯಾಚರಣೆಯಲ್ಲಿ ಉಪ ತಹಶೀಲ್ದಾರ್ ರವಿಶಂಕರ್ ಅವರನ್ನು ಬಂಧಿಸಿದ್ದಾರೆ.

ಆರ್​​ಟಿಸಿ ತಿದ್ದುಪಡಿ ಮಾಡಲೆಂದು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದಿದ್ದ ದೂರಿನನ್ವಯ ಅಧಿಕಾರಿಗಳು ದಾಳಿ ನಡೆಸಿದ್ದು, ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್​ಟಿಸಿಯಲ್ಲಿ ತಿದ್ದುಪಡಿ ಮಾಡಿ ಕೊಡಲು ಉಪತಹಶೀಲ್ದಾರ್ 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವನ್ನು ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಪೊಲೀಸ್ ಅಧೀಕ್ಷಕ ಬೋಪಯ್ಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ ಸಿ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ಹರಿಪ್ರಸಾದ್, ರಾಧಾಕೃಷ್ಣ, ಉಮೇಶ್, ರಾಧಾಕೃಷ್ಣ ಡಿ.ಎ, ಪ್ರಶಾಂತ್ ಎಂ, ವೈಶಾಲಿ, ರಾಜೇಶ್ ಪಿ, ರಾಕೇಶ್ ವಾಗ್ಮೇನ್, ಸತೀಶ್ ಹಾಗೂ ಭರತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.