ETV Bharat / state

ಕೆಎಸ್​ಆರ್​ಟಿಸಿ ಬಸ್​-ಕಾರು ಡಿಕ್ಕಿ; ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ - Accident between KSR TC Bus And Car collide in Nelyadi

ಕೆಎಸ್​ಆರ್​ಟಿಸಿ ಬಸ್ ಮತ್ತು ಅಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ

Accident between KSR TC Bus And Car in Nelyadi
ಕೆಎಸ್​ಆರ್​ಟಿಸಿ ಬಸ್​-ಕಾರು ಡಿಕ್ಕಿ
author img

By

Published : Feb 13, 2021, 4:33 PM IST

ನೆಲ್ಯಾಡಿ: ಕೆಎಸ್​ಆರ್​ಟಿಸಿ ಬಸ್ ಮತ್ತು ಅಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಸಮೀಪ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಕ್ಕಡದ ಪಟ್ರಮೆಯ ನಿವಾಸಿಗಳು ಅಲ್ಟೋ ಕಾರಿನಲ್ಲಿದ್ದರು.

ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಸ್ - ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.