ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಐವರಿಗೆ ಗಂಭೀರ ಗಾಯ - ಬಂಟ್ವಾಳ ಅಪಘಾತ ಸುದ್ದಿ
ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ.
ಬಂಟ್ವಾಳ
ಬಂಟ್ವಾಳ: ತಾಲೂಕಿನ ವಿಟ್ಲದ ಕಾಶಿಮಠ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಘಟನೆ ನಡೆದಿದೆ.
ವಿಟ್ಲ ಸಮೀಪದ ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದಾಗ, ವಿಟ್ಲ ಕಡೆಯಿಂದ ಕನ್ಯಾನ ಕಡೆಗೆ ತೆರಳುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆ್ಯಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.