ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಕೊಡಿಯಾಲ್ ಬೈಲ್ನ ಜೈಲ್ ರೋಡ್ ಸಮೀಪ ನಡೆದಿದೆ.
ಕಾರು ರಸ್ತೆಯಲ್ಲಿ ಚಲಿಸುತ್ತಿರುವಾಗಲೇ ಇಂಜಿನ್ನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಬಳಿಕ ಆ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ವಿಕ್ರಂ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗಿಳಿದಿದ್ದಾರೆ. ಪರಿಣಾಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಕಾರಿನಲ್ಲಿದ್ದ ಎಸಿ ದುರಸ್ತಿಪಡಿಸಿ ಗ್ಯಾರೇಜ್ನಿಂದ ತರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಚಾಲಕ ವಿಕ್ರಂ ಮಾಹಿತಿ ನೀಡಿದ್ದಾರೆ.