ಬಂಟ್ವಾಳ: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ ಸಂಬಂಧಿರೊಬ್ಬರ ಅಂತ್ಯಕ್ರಿಯೆಗೆ ತೆರಳಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 50 ಸಾವಿರ ನಗದು, 20 ಪವನ್ ಚಿನ್ನಾಭರಣ, ಪಿಠೋಪಕರಣಗಳು ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಕೂಡಲೇ ಸ್ಥಳಕ್ಕೆ ತೆರಳಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಓದಿ: ಕಾರವಾರ: ಸೈಕ್ಲೋನ್ ಅಬ್ಬರದಿಂದ ಕಾಳಿ ನದಿಯಲ್ಲಿ ಸಿಲುಕಿ ಸಾವನ್ನೇ ಗೆದ್ದು ಬಂದ ವೃದ್ಧ!