ಮಂಗಳೂರು: ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35 ರ ಪ್ರಯಾಣಿಕನ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಈತ ಪನ್ವೇಲ್ ರೈಲು ನಿಲ್ದಾಣದಿಂದ ನಗರಕ್ಕೆ ಈ ರೈಲಿನಲ್ಲಿ ಬಂದಿದ್ದ.
ಈತನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ ತಪಾಸಣೆ ನಡೆಸಿದಾಗ ಅದರಲ್ಲಿ ರೂ. 1,48,58,000 ನಗದು ಮತ್ತು 40 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಇವುಗಳಿಗೆ ಪ್ರಯಾಣಿಕನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಇರುವುದರಿಂದ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಿಸುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಓದಿ: ಕೊರೊನಾ ಲಸಿಕೆ ಮೊದಲ ಡೋಸ್.. ಶೇ.100 ರಷ್ಟು ಸಾಧನೆ: ಸಚಿವ ಡಾ.ಕೆ.ಸುಧಾಕರ್