ETV Bharat / state

ವಿವಾಹಿತ ಮಹಿಳೆಯರ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್: ಆರೋಪಿ ಅರೆಸ್ಟ್​

ವಿವಾಹಿತ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಅವರ ಜೊತೆ ಸ್ನೇಹ ಬೆಳಸಿ ನಂತರ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ರಾಧಾಕೃಷ್ಣ
ರಾಧಾಕೃಷ್ಣ
author img

By

Published : Feb 19, 2022, 9:32 AM IST

ಬಂಟ್ವಾಳ( ದಕ್ಷಿಣ ಕನ್ನಡ): ಪರಿಚಿತ ಮಹಿಳೆಯೊಬ್ಬರ ಜೊತೆ ಸ್ನೇಹ ಬೆಳಸಿ ಆಕೆಯ ಫೋಟೋಗಳನ್ನಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ರಾಧಾಕೃಷ್ಣ ಬಂಧಿತ ಆರೋಪಿ. ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಹೆದರಿಸಿ ಹಣಕ್ಕೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಿ ಮಹಿಳೆಯ ಪತಿ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

ವಿವಾಹಿತ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದ ಈತ, ಇಂತಹ ಹಲವು ಕೃತ್ಯಗಳನ್ನು ಎಸಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪರಿಚಿತ ವಿವಾಹಿತರ ಜೊತೆ ಸ್ನೇಹ ಸಂಪಾದಿಸಿ, ಅವರೊಂದಿಗೆ ಕಾಲ ಕಳೆದು ಬಳಿಕ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ​ ಹರಿ ಬಿಡುವುದಾಗಿ ಬೆದರಿಸಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ.

ಇದನ್ನೂ ಓದಿ: ಯೂರೋಪ್​ನಲ್ಲಿ ಒಂದು ವಾರದಲ್ಲಿ ಎರಡನೇ ಚಂಡಮಾರುತ, 8 ಮಂದಿ ಸಾವು

ಆರೋಪಿ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವಣೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಅವರ ನಿರ್ದೇಶನದಂತೆ ನಗರ ಠಾಣಾ ಪೊಲೀಸ್ ಇನ್ಸ್​ಪೆಕ್ಟರ್ ವಿವೇಕಾನಂದ ಅವರ ನೇತೃತ್ವದಲ್ಲಿ ಎಸ್ ಐ.ಅವಿನಾಶ್, ಸಿಬ್ಬಂದಿ ಗಣೇಶ್ ಪ್ರಸಾದ್, ನಾಗರಾಜ್, ರಾಘವೇಂದ್ರ, ಗಣೇಶ್ ನೆಟ್ಲ ಕಾರ್ಯಾಚರಣೆ ನಡೆಸಿ ಖದೀಮನನ್ನ ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.