ETV Bharat / state

ಗುದನಾಳದಲ್ಲಿ 13 ಲಕ್ಷ ಮೌಲ್ಯದ ಚಿನ್ನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಸೆರೆ - gold seized in mangalore airport

ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಆರೋಪಿಯನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ.

accused-arrested-for-carrying-illegal-gold-in-mangalore-airport
13 ಲಕ್ಷ ಮೌಲ್ಯದ ಚಿನ್ನ ವಶ
author img

By

Published : Mar 19, 2021, 5:33 PM IST

ಮಂಗಳೂರು: ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಆರೋಪಿಯನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಈತನ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ.

ಇದನ್ನೂ ಓದಿ: ಧಾರವಾಡದ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ

ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,16,238 ಎಂದು ಅಂದಾಜಿಸಲಾಗಿದೆ. ಕಸ್ಟಮ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.