ಮಂಗಳೂರು: ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ ಮತ್ತೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಕೃತ್ಯ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ಈ ಪ್ರಕರಣದಲ್ಲಿ ಗ್ರಾಹಕರ ರೀತಿ ಬಂದು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ನಾಲ್ವರು ಆರೋಪಿಗಳನ್ನು ಪೋಕ್ಸೊ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ವ್ಯಾಸನಗರ ನಿವಾಸಿ ರಶೀದ್ ಸಾಹೇಬ್ (73), ಮಲ್ಲಿಕಟ್ಟೆ ನಿವಾಸಿ ಮಹಮ್ಮದ್ ಅಲಿ (74), ಕುಲಶೇಖರ ನಿವಾಸಿ ಗ್ರೆಗರಿ ಲಿಯೋನಾರ್ಡ್ (62), ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ (41) ಬಂಧಿತರು.
ಮಂಗಳೂರಿನ ರಿಯಾನ ರೆಸಿಡೆನ್ಸಿ ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ತಮ್ಮ ಪ್ಲ್ಯಾಟ್ನಲ್ಲಿಯೇ ಆರೋಪಿಗಳು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಹಿಂದೆಯೇ ಪೊಲೀಸರು ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ತೆಯರನ್ನು ರಕ್ಷಿಸಿದ್ದರು.
ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಪರಿಣಾಮ ಆರೋಪಿಗಳು ಮತ್ತೋರ್ವ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆಗೆ ತಳ್ಳಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಬಂಧಿತ ನಾಲ್ವರು ಆರೋಪಿಗಳ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಅಲ್ಲದೆೇ, ಸಂತ್ರಸ್ತ ಬಾಲಕಿಯನ್ನು ದಂಧೆಗೆ ಬಳಸಿಕೊಂಡ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ 14ಕ್ಕೇರಿದೆ. ಇನ್ನಷ್ಟು ಆರೋಪಿಗಳು ಈ ಪ್ರಕರಣದ ಹಿಂದಿದ್ದು, ಕೆಲವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರನ್ನು ಶೀಘ್ರದಲ್ಲಿ ಬಂಧಿಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಇದನ್ನೂ ಓದಿ: ಬೆಂಗಳೂರು: 34 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ