ಮಂಗಳೂರು: ಬಸ್ಸೊಂದರಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಪ್ರಯಾಣಿಕರು ಹಾಗೂ ಬಸ್ ನಿರ್ವಾಹಕ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಆತ ಠಾಣೆಯಲ್ಲಿ ಸ್ವಲ್ಪ ಸಮಯ ಇದ್ದು ನಂತರ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸುಳ್ಯದಿಂದ ಪುತ್ತೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಕಿರುಕುಳ ನೀಡಿದ್ದ. ಇದನ್ನು ವಿದ್ಯಾರ್ಥಿನಿ ಬಸ್ ನಿರ್ವಾಹಕನಿಗೆ ಮತ್ತು ಬಸ್ನಲ್ಲಿದ್ದವರಿಗೆ ತಿಳಿಸಿದ್ದಳು. ಆಗ ಬಸ್ ನಿರ್ವಾಹಕ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗ ಬಸ್ ನಿಲ್ಲಿಸಿ ಕಿರುಕುಳ ನೀಡಿದ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದರು.
ಸ್ವಲ್ಪ ಸಮಯಗಳ ಕಾಲ ಠಾಣೆಯಲ್ಲಿ ಕುಳಿತಿದ್ದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಬೆನ್ನುಬಿದ್ದರು ಅವರ ಕಣ್ತಪ್ಪಿಸಿ ಓಡಿ ಹೋಗಿದ್ದಾನೆ.