ETV Bharat / state

ದಕ್ಷಿಣ ಕನ್ನಡ: ಅನ್ಯಕೋಮಿನ ವಿದ್ಯಾರ್ಥಿನಿ ಮಾತನಾಡಿಸಿದ್ದಕ್ಕೆ ಹಲ್ಲೆ ಆರೋಪ

author img

By

Published : Aug 31, 2022, 10:47 AM IST

Updated : Aug 31, 2022, 7:09 PM IST

ಕಾಲೇಜಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿಯೊಂದಿಗೆ ಮಾತನಾಡಿದ್ದಕ್ಕೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ.

Accused of assault on student
ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿಸಿದಕ್ಕೆ ವಿದ್ಯಾರ್ಥಿಗೆ ಹಲ್ಲೆ ಆರೋಪ

ಸುಳ್ಯ(ದಕ್ಷಿಣ ಕನ್ನಡ) : ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲ್ ಬೈಲಿನಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಲ್ಲೆ ಮಾಡಿದ ಆರೋಪದಡಿ 9 ಮಂದಿ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಅನ್ಯಕೋಮಿನ ಪ್ರಥಮ ವರ್ಷದ ಬಿ.ಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದ. ಇದರಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಕೆಲವು ಫೋಟೋಗಳು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಮಾತನಾಡಿದ್ದು ತಿಳಿದ ಅದೇ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿಗಳು ಅನ್ಯಕೋಮಿನ ಹುಡುಗನನ್ನು ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ದೊಣ್ಣೆಯಿಂದ ಬೆನ್ನಿಗೆ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಒಬ್ಬಳೇ ಹೆಂಡತಿಗಾಗಿ ಇಬ್ಬರು ಗಂಡಂದಿರ ನಡುವೆ ಜಗಳ

Last Updated : Aug 31, 2022, 7:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.