ETV Bharat / state

ಜಾಮೀನಿನ ಮೇಲೆ ಹೊರಬಂದು ಮತ್ತೆ ಡ್ರಗ್ಸ್ ಮಾರಾಟ: ಮಂಗಳೂರಲ್ಲಿ ಇಬ್ಬರು ಅರೆಸ್ಟ್

ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 15 ದಿನದಲ್ಲಿ ಅದೇ ಚಾಳಿ ಮುಂದುವರಿಸಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

author img

By ETV Bharat Karnataka Team

Published : Sep 23, 2023, 6:53 AM IST

ಅಬ್ದುಲ್ ಅಜೀಜ್ ಯಾನೆ ಅಜೀಜ್
ಅಬ್ದುಲ್ ಅಜೀಜ್ ಯಾನೆ ಅಜೀಜ್

ಮಂಗಳೂರು: ಮಾದಕ‌ ವಸ್ತು ಎಂಡಿಎಂಎ ಮಾರಾಟ ಮಾಡಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ‌ ಮಾರಾಟ ಮಾಡಿ, ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ.

ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಆರೋಪಿ ಬಿಡುಗಡೆಗೊಂಡಿದ್ದ. ಬಿಡುಗಡೆ ಬಳಿಕ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸಿ, ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳದ ಅಕ್ಷಿತ್ ಕುಮಾರ್(26) ಎಂಬಾತನನ್ನು ಬಂಧಿಸಲಾಗಿದೆ. "ಡ್ರಗ್ಸ್ ಫ್ರಿ ಮಂಗಳೂರು" ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಈ ಇಬ್ಬರನ್ನು ಬಂಧಿಸಲಾಗಿದೆ.

ಮಂಗಳೂರು ನಗರದ ಕೆ. ಎಸ್ ರಾವ್ ರಸ್ತೆ ಪರಿಸರದಲ್ಲಿ ವ್ಯಕ್ತಿಗಳಿಬ್ಬರು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ದಾಳಿ ನಡೆಸಿ ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಈ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು 35 ಗ್ರಾಂ ತೂಕದ 1,75,000 ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್​ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.

ಕೆಲ ತಿಂಗಳ ಹಿಂದೆ 9 ಲಕ್ಷ ಮೌಲ್ಯದ ಎಂಡಿಎಂಎ ವಶ, ಮೂವರ ಬಂಧನ : ಮಂಗಳೂರು ನಗರದಾದ್ಯಂತ ಮಾದಕ ವಸ್ತು ಎಂಡಿಎಂಎ (Methylete dloxy methamphetamine) ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು (ಜುಲೈ 21-2023) ಬಂಧಿಸಿದ್ದರು. ಕೃಷ್ಣಾಪುರದ ಮೊಹಮ್ಮದ್ ನಿಯಾಜ್ (28), ತಲಪಾಡಿಯ ನಿಶಾದ್ (31) ಹಾಗೂ ಪಡೀಲ್ ಕಣ್ಣೂರಿನ ಮಹಮ್ಮದ್ ರಝೀನ್ (24) ಬಂಧಿತರು ಎಂಬುದು ತಿಳಿದುಬಂದಿತ್ತು.

ಇದನ್ನೂ ಓದಿ: ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹9 ಲಕ್ಷ ಮೌಲ್ಯದ ಎಂಡಿಎಂಎ ವಶ, ಮೂವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.