ಕಡಬ: ನಗರದ ಕೋಡಿಂಬಾಳದಲ್ಲಿ ನಡೆದಿದ್ದ ಮಹಿಳೆ ಮತ್ತು ಮಗುವಿನ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಗಿದೆ.
ಅದೇ ರೀತಿ ಸಂತ್ರಸ್ತರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು ಹಾಗೂ ಸಂತ್ರಸ್ತೆ ಸ್ವಪ್ನಾ ರವಿಕುಮಾರ್ ಅವರ ಮೂವರು ಹೆಣ್ಣು ಮಕ್ಕಳ ಶಿಕ್ಷಣದ ಪೂರ್ತಿ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಮತ್ತು ಆರೋಪಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಎಪಿಎಂಸಿ ನಿರ್ದೇಶಕಿ ಹಾಗೂ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಪುಲಸ್ತ್ಯಾ ರೈ ಮಾತನಾಡಿ, ದಕ್ಷಿಣಕನ್ನಡ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸರೋಜಿನಿ ಜಯಪ್ರಕಾಶ್, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಹಾಜರಿದ್ದರು.