ಮಂಗಳೂರು: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಾಸಗಿ ಚಾನೆಲ್ ಗೆ ಹೇಳಿಕೆ ನೀಡಿರುವ ವಿರುದ್ದ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರು ಸಿಎಂ ಹೇಳಿಕೆಯಿಂದ ನಮಗೆ ನೋವಾಗಿದೆ. ಇದನ್ನು ನಾವು ಖಂಡಿಸುತ್ತೇವೆ. ಈ ಹೇಳಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಚಾರಗಳನ್ನು ಹಾಕಿದ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗುತ್ತಿದೆ. ಅವರ ಹೇಳಿಕೆಯ ಬಗ್ಗೆ ಹಿರಿಯ ನಾಯಕರ ಗಮನಕ್ಕೆ ತಂದಿದ್ದು, ಅವರು ಕೇಂದ್ರ ನಾಯಕರ ಗಮನಕ್ಕೆ ತರುತ್ತಾರೆ ಎಂದು ತಿಳಿಸಿದರು.
ಅಲ್ಲದೇ ಸಿಎಂ ಹೇಳಿಕೆ ನೀಡಿರುವುದು ಸರಿಯಲ್ಲ. ಪೊಲೀಸ್ ಇಲಾಖೆ , ಜಿಲ್ಲಾಡಳಿತ ನಮ್ಮ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.