ಮಂಗಳೂರು: ನಗರದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಡ್ರೋನ್ ಬಳಕೆ ಮಾಡುತ್ತಿರುವುದು ಕಂಡುಬಂದಿದ್ದು, ಇದು ಹೀಗೆಯೇ ಮುಂದುವರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ, ಖಾಸಗಿ ಕಾರ್ಯಕ್ರಮ, ಮದುವೆ ಕಾರ್ಯಕ್ರಮ, ಗಣ್ಯರ ಕಾರ್ಯಕ್ರಮದಲ್ಲಿ ಡ್ರೋನ್ ಬಳಕೆ ಮಾಡಲಾಗುತ್ತಿರುವುದು ಗಮನಕ್ಕೆ ಬಂದಿದೆ. ಡಿಜಿಸಿಎ ಮಾರ್ಗದರ್ಶನದಂತೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಡ್ರೋನ್ ಬಳಕೆ ಮಾಡಬೇಕು ಎಂದರು.
ಡ್ರೋನ್ ಮಾಲೀಕರು ಮತ್ತು ಅದನ್ನು ಬಳಸಲು ಸೂಚಿಸುವವರು ಸೂಕ್ತ ಅನುಮತಿ ಪಡೆಯದೆ ಬಳಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಓದಿ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಶೋಧಕಾರ್ಯ ಮುಂದುವರೆದಿದೆ: ಶಶಿಕುಮಾರ್