ETV Bharat / state

ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಂದ ಮಹತ್ವದ ಮಾಹಿತಿ ಲಭ್ಯ

ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ದಸ್ತಗಿರಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Actor Surendra Bantwal murder case Significant information available
ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳ ತನಿಖೆ
author img

By

Published : Oct 27, 2020, 8:00 AM IST

ಬಂಟ್ವಾಳ: ಕಳೆದ ಬುಧವಾರ ಬಂಟ್ವಾಳದ ಭಂಡಾರಬೆಟ್ಟು ಎಂಬಲ್ಲಿ ಚಿತ್ರ ನಟ ಸುರೇಂದ್ರ ಬಂಟ್ವಾಳ್ (39) ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ದಸ್ತಗಿರಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸೋಮವಾರ ಸಂಜೆ ಮುಖ್ಯ ಆರೋಪಿಗಳಿಬ್ಬರು ತಲೆಮರೆಸಿಕೊಂಡು ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಬಂಟ್ವಾಳ ನಗರ ಎಸ್​​ಐ ಅವಿನಾಶ್ ಅಮ್ಟಾಡಿ, ಗ್ರಾಮದ ಅಜೆಕಳ ನಿವಾಸಿ ಸತೀಶ್ ಕುಲಾಲ್ (39) ಮತ್ತು ನೀರುಮಾರ್ಗ ನಿವಾಸಿ ಗಿರೀಶ್ (28) ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆರೋಪಿಗಳ ವಿಚಾರಣೆಯಿಂದ ಹಲವು ಮಹತ್ವದ ಮಾಹಿತಿಗಳು ಹೊರ ಬಂದಿದ್ದು, ಕೂಲಂಕಶ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಎಸ್ಪಿ ಡಾ. ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವೆಲಂಟೈನ್ ಡಿಸೋಜ ನೇತೃತ್ವದಲ್ಲಿ ತನಿಖಾಧಿಕಾರಿಯಾಗಿ ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ಕಾರ್ಯಾಚರಿಸುತ್ತಿದ್ದು, ಆರೋಪಿಗಳ ಪತ್ತೆ ಬಗ್ಗೆ ಇನ್ಸ್​​​ಪೆಕ್ಟರ್ ರವಿ, ಎಸ್​​​ಐಗಳಾದ ಅವಿನಾಶ್, ಪ್ರಸನ್ನ, ನಂದಕುಮಾರ್, ವಿನೋದ್, ರಾಜೇಶ್, ಕಲೈಮಾರ್ ಮತ್ತು ಡಿಸಿಐಬಿ ಸಿಬ್ಬಂದಿ ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.