ETV Bharat / state

ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಆರೋಪಿಗಳು 5 ದಿನ ಪೊಲೀಸ್​​ ಕಸ್ಟಡಿಗೆ - ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳು

ತುಳು ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್ (39 ) ಹಾಗೂ ಮಂಗಳೂರು ನೀರುಮಾರ್ಗ ಬೋಂಡಂತಿಲ ನಿವಾಸಿ ಗಿರೀಶ್ (28) ಎಂಬ ಆರೋಪಿಗಳಿಬ್ಬರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

surendra
ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳು 5 ದಿನ ಪೊಲೀಸ್​​ ಕಸ್ಟಡಿಗೆ
author img

By

Published : Oct 28, 2020, 3:54 PM IST

Updated : Oct 28, 2020, 6:52 PM IST

ಬಂಟ್ವಾಳ: ತಾಲೂಕಿನ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್​​​ಮೆಂಟ್​​ನಲ್ಲಿ ಅ.20ರಂದು ನಡೆದ ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್ (39 ) ಹಾಗೂ ಮಂಗಳೂರು ನೀರುಮಾರ್ಗ ಬೋಂಡಂತಿಲ ನಿವಾಸಿ ಗಿರೀಶ್ (28) ಎಂಬುವರು ಸದ್ಯ ಬಂಧಿತ ಆರೋಪಿಗಳು. ಇವರಲ್ಲದೇ ಇನ್ನೂ ಹಲವರ ವಿಚಾರಣೆ ನಡೆಯುತ್ತಿದ್ದು, ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ತಲವಾರನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಗೆ ಕೇಳಲಾಗಿತ್ತು. ಸದ್ಯ ಆರೋಪಿಗಳಿಬ್ಬರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ದ.ಕ. ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ನಿರ್ದೇಶನದಲ್ಲಿ ಬಂಟ್ವಾಳ ಇನ್ಸ್​​ಪೆಕ್ಟರ್ ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಪಿಎಸ್​​ಐ ಗಳಾದ ಅವಿನಾಶ್, ಪ್ರಸನ್ನ, ನಂದಕುಮಾರ್, ವಿನೋದ್, ರಾಜೇಶ್, ಕಲೈಮಾರ್, ಪಿಐ ರವಿ ಮತ್ತು ಡಿಸಿಐಬಿ ಸಿಬ್ಬಂದಿಯನ್ನು ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ರಚಿಸಲಾಗಿತ್ತು. ಈ ಮಧ್ಯೆ ಸುರೇಂದ್ರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕು ಎಂದು ಬಂಟ್ವಾಳ ತಾಲೂಕು ಭಂಡಾರಿ ಸಮಾಜ ಒತ್ತಾಯಿಸಿದೆ.

Last Updated : Oct 28, 2020, 6:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.