ಮಂಗಳೂರು: ಸಿಎಎ ವಿರೋಧಿಸಿ ನಾಳೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಶಹಾ ಗಾರ್ಡನ್ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪರಿಶೀಲನೆ ನಡೆಸಿದರು.
ಶಹಾ ಗಾರ್ಡನ್ನ ಪಾರ್ಕಿಂಗ್ ವ್ಯವಸ್ಥೆ, ವೇದಿಕೆ, ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದ ಅವರು ಸಮಾವೇಶಕ್ಕೆ ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾಹಿತಿ ಪಡೆದರು.
ಎಡಿಜಿಪಿ ಅಮರ್ ಕುಮಾರ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು, ಭದ್ರತಾ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಂಗಳೂರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದು, ಎಲ್ಲಾ ವಲಯಗಳಿಂದ ಐಜಿಪಿಗಳಿಗೆ ಡಿಜಿ ಕಚೇರಿಯಿಂದ ಸೂಚನೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ವ್ಯವಸ್ಥೆಗಾಗಿ ರಾಜ್ಯದ 7 ವಲಯಗಳಿಂದ ಅಂದಾಜು 2000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಇನ್ನುಳಿದ 6 ಕಮಿಷನರೇಟ್ ವ್ಯಾಪ್ತಿಯಿಂದಲೂ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಜೊತೆಗೆ 11 ಮಂದಿ ಅಡಿಷನಲ್ ಎಸ್‌ಪಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು, 25 ಡಿವೈಎಸ್‌ಪಿ, 85 ಇನ್ಸ್‌ಪೆಕ್ಟರ್‌ಗಳು, 200 ಪಿಎಸ್‌ಐಗಳನ್ನು ನಿಯೋಜನೆಗೊಂಡಿದ್ದಾರೆ ಎಂದು ತಿಳಿಸಿದರು.