ETV Bharat / state

ಮಳಲಿ ಮಸೀದಿಯಲ್ಲಿ ದೇಗುಲ ಶೈಲಿ ಪತ್ತೆ ವಿವಾದ: ವಿಚಾರಣೆ ನಾಳೆಗೆ ಮುಂದೂಡಿಕೆ

ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದ ಬಗ್ಗೆ ಇಂದು ಸುದೀರ್ಘ ವಿಚಾರಣೆ ನಡೆದಿದ್ದು, ನಾಳೆಗೆ ಮುಂದೂಡಲಾಗಿದೆ. ವಿಎಚ್‌ಪಿ ಪರ ವಕೀಲ ಚಿದಾನಂದ ಕೆದಿಲಾಯ ವಾದ ಮಂಡನೆ ಮಾಡಿದ್ದು, ನಾಳೆ ಮಸೀದಿ ಆಡಳಿತ ಮಂಡಳಿ ಪರ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.

adjournment-hearing-of-malali-masjid-controversy-case
ಮಳಲಿ ಮಸೀದಿ ವಿವಾದ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿಕೆ
author img

By

Published : Jun 9, 2022, 7:25 PM IST

ದಕ್ಷಿಣ ಕನ್ನಡ: ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದದ ಪ್ರಕರಣದಲ್ಲಿ ಇಂದು ಸುದೀರ್ಘ ವಿಚಾರಣೆ ನಡೆದಿದ್ದು, ನಾಳೆಗೆ ಮುಂದೂಡಲಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್‌ನಲ್ಲಿ ನ್ಯಾಯಾಲಯದ ವ್ಯಾಪ್ತಿಯ ಬಗ್ಗೆ ವಿಚಾರಣೆ ನಡೆಯಿತು. ಮಸೀದಿ ಪರ ವಕೀಲರು ಜೂನ್ 6ರಂದು ವಾದ ಮಂಡಿಸಿದ್ದು, ವಿಎಚ್‌ಪಿ ಪರ ವಕೀಲ ಚಿದಾನಂದ ಕೆದಿಲಾಯ ವಾದ ಮಂಡಿಸಿದ್ದು, ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವಿಹೆಚ್​ಪಿ ಪರ ವಕೀಲರು, ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿಯು ವಕ್ಫ್ ಟ್ರಿಬ್ಯುನಲ್ ವ್ಯಾಪ್ತಿಗೆ ಬರುವುದಿಲ್ಲ. ವಕ್ಫ್ ಆಸ್ತಿ ಹೌದೋ, ಅಲ್ಲವೋ ಎಂಬುದನ್ನು ನಾವು ಪ್ರಶ್ನಿಸಿಲ್ಲ. ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನವಾಗಿತ್ತು. ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ನಮ್ಮ ಅರ್ಜಿದಾರರು ಹೇಳಿದ್ದಾರೆ.‌‌ ಮಸೀದಿಯ ಕಟ್ಟಡ ಮಸೀದಿಯೋ ಅಥವಾ ಐತಿಹಾಸಿಕ ಸ್ಮಾರಕವೋ ಎಂಬುದನ್ನು ವಕ್ಫ್ ಟ್ರಿಬ್ಯೂನಲ್ ತೀರ್ಮಾನಿಸಲು ಆಗುವುದಿಲ್ಲ.‌ ಹೀಗಾಗಿ ಅದನ್ನು ಸಿವಿಲ್ ಕೋರ್ಟ್ ನಿರ್ಧರಿಸಬೇಕು. ಹೀಗಾಗಿ ಆ ಜಾಗದ ಸರ್ವೆಗೆ ಆದೇಶ ಮಾಡಿದರೆ ಅಲ್ಲಿನ ಸ್ಮಾರಕ ಯಾವುದು ಎಂಬುದು ತಿಳಿಯಲಿದೆ ಎಂದು ವಿಹೆಚ್‌ಪಿ ಪರ ವಕೀಲ ಚಿದಾನಂದ ಕೆದಿಲಾಯ ವಾದಿಸಿದರು.

1991ರ ಪೂಜಾ ಸ್ಥಳ ಕಾಯ್ದೆಯಡಿಯಲ್ಲಿಯೂ ಈ ಅರ್ಜಿಯನ್ನು ವಜಾಗೊಳಿಸಲು ಆಗುವುದಿಲ್ಲ. ಪೂಜಾ ಸ್ಥಳ ಕಾಯ್ದೆಯಲ್ಲಿ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯ ಬಗ್ಗೆ ಹೇಳಲಾಗಿದೆ. ಎಲ್ಲ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಇಲ್ಲಿ ಉಲ್ಲೇಖವಿದ್ದು, ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ‌ ಅಲ್ಲಿರುವ ಸ್ಮಾರಕ ಬಗ್ಗೆ ಗೊತ್ತಾಗಬೇಕಾಗಿದೆ. ಆದ್ದರಿಂದ ಈಗ ಇರುವ ತಡೆಯಾಜ್ಞೆಯನ್ನು ತೆರವು ಮಾಡಿದರೆ ಅಲ್ಲಿ ಮಸೀದಿ ನಿರ್ಮಾಣ ಆಗಲಿದ್ದು,ಇದರಿಂದ ಐತಿಹಾಸಿಕ ಸ್ಮಾರಕವೊಂದರ ಸಂರಕ್ಷಣೆ ಅಸಾಧ್ಯ ಎಂದು ವಾದಿಸಿದರು.

ಇದನ್ನೂ ಓದಿ: ಗುಡ್ಡವೇರಿ ಆತ್ಮಹತ್ಯೆಗೆ ಮುಂದಾಗಿದ್ದ ಬಾಲಕಿಯ ಮನವೊಲಿಸಿ ಪ್ರಾಣ ಕಾಪಾಡಿದ ಪೊಲೀಸ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.