ಮಂಗಳೂರು: ವಕೀಲರಿಗೆ ಹಾಗೂ ನ್ಯಾಯಾಲಯಕ್ಕೆ ಅವಮಾನ ಮಾಡಲಾಗಿದೆ ಎಂದು ಗಿರಿಗಿಟ್ ತುಳು ಸಿನಿಮಾದ ವಿರುದ್ಧ ಜಿಲ್ಲೆಯ ವಕೀಲರ ಸಂಘ ನ್ಯಾಯಾಲಯದ ಮೆಟ್ಟಿಲೇರಿದೆ.
ಸಿನಿಮಾದಲ್ಲಿ ವಕೀಲರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಿರುವ ವಕೀಲರ ಸಂಘ, ಸಿನಿಮಾಕ್ಕೆ ತಡೆಯಾಜ್ಞೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದೆ.
5ನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ಹರೀಶ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.