ETV Bharat / state

ಮಂಗಳೂರಿನಲ್ಲಿ ಬಾಣಂತಿ ಸಾವು : ಖಾಸಗಿ ಆಸ್ಪತ್ರೆ ಎದರು ಕುಟುಂಬಸ್ಥರಿಂದ ಪ್ರತಿಭಟನೆ - etv bharat kannda

ಖಾಸಗಿ ಆಸ್ಪತ್ರೆ ‌ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

allegation-of-death-of-pregnant-woman-due-to-doctor-negligence-in-mangaluru
ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು ಆರೋಪ: ಆಸ್ಪತ್ರೆ ಎದರು ಕುಟುಂಬಸ್ಥರಿಂದ ಪ್ರತಿಭಟನೆ
author img

By

Published : Jul 26, 2023, 3:45 PM IST

Updated : Jul 26, 2023, 5:51 PM IST

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಣಂತಿ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ಕುಟುಂಬಸ್ಥರು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಮೂಲದ ಶಿಲ್ಪಾ ಆಚಾರ್ಯ ಮೃತಪಟ್ಟ ಬಾಣಂತಿ. ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು. ಶಿಲ್ಪಾ ಅವರನ್ನು ಪರೀಕ್ಷೆ ನಡೆಸುತ್ತಿದ್ದ ವೈದ್ಯರು ಭಾನುವಾರ ರಜೆ ಇದ್ದಿದ್ದರಿಂದ ಬೇರೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಕೋಮಾಕ್ಕೆ ಜಾರಿದ್ದರು. ಜುಲೈ 25ರಂದು ಶಿಲ್ಪಾ ಸಾವನ್ನಪ್ಪಿದ್ದಾಗಿ ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರೋಗ್ಯವಾಗಿಯೇ ಇದ್ದ ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಮರಣೋತ್ತರ‌ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗುತ್ತಿತ್ತು, ಈ ವೇಳೆ ಆಸ್ಪತ್ರೆ ಬಳಿ ಮೃತದೇಹ ತಡೆದು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿ ಬರುವಂತೆ ಆಂಬ್ಯುಲೆನ್ಸ್ ತಡೆದಿದ್ದಾರೆ, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಮೃತದೇಹವನ್ನು ಮರಣೋತ್ತರ‌ ಪರೀಕ್ಷೆಗೆ ಸಾಗಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ಆಸ್ಪತ್ರೆ ಆಡಳಿತ ಮಂಡಳಿ ಲಭ್ಯರಾಗಿಲ್ಲ.

ಬಾವುಟಗುಡ್ಡೆಯ ಕಟ್ಟಡದಲ್ಲಿ ಬೆಂಕಿ‌ ಅವಘಡ: ಮತ್ತೊಂದೆಡೆ, ನಗರದ ಬಾವುಟಗುಡ್ಡೆಯ ರಿಲಯನ್ಸ್ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದ ಕಂಪ್ಯೂಟರ್, ಎಸಿ ಮತ್ತಿತರ ವಸ್ತುಗಳು ಸುಟ್ಟುಹೋಗಿವೆ. ಬಾವುಟಗುಡ್ಡೆಯ ಕೆಎಂಸಿ ದಂತ ವೈದ್ಯಕೀಯ ಕಾಲೇಜು ಎದುರುಗಡೆಯಿರುವ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್​ನ 3ನೇ ಅಂತಸ್ತಿನಲ್ಲಿರುವ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ತಕ್ಷಣ ಪಾಂಡೇಶ್ವರ ಅಗ್ನಿಶಾಮಕ‌ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದಾರೆ.‌ ಇನ್ನು ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ‌‌ ಸೃಷ್ಟಿಯಾಗಿತ್ತು.

ಇದನ್ನೂ ಓದಿ:ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ತೊಂದರೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಾರ್ಭಟ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರದಿಂದ ಆರಂಭವಾದ ವ್ಯಾಪಕ ಗಾಳಿ ಸಹಿತ ಮಳೆ ಇಂದೂ ಕೂಡ ಮುಂದುವರೆದಿದೆ. ಭಾರಿ ಮಳೆಯಿಂದ ಜಿಲ್ಲೆಯಲ್ಲಿ 20ಕ್ಕೂ ಅಧಿಕ ಮನೆಗಳಿಗೆ ಹಾನಿ ಆಗಿದ್ದು, ಸುಮಾರು 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಹವಾಮಾನ ಇಲಾಖೆ ಇಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಅಂಗನವಾಡಿ, ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಂದು ಮಂಗಳೂರಿಗೆ ಚಿನ್ನಾಭರಣ ಮಾರಲು ಬಂದ ಮೊಮ್ಮಗ ಪೊಲೀಸ್ ಬಲೆಗೆ

Last Updated : Jul 26, 2023, 5:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.