ಬಂಟ್ವಾಳ: ನನಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ್ದಾನೆ ಎಂದು 16 ವರ್ಷದ ಬಾಲಕನ ವಿರುದ್ಧ ಬಾಲಕಿಯೊಬ್ಬಳು ವಿಟ್ಲ ಠಾಣೆಗೆ ದೂರು ನೀಡಿದ್ದು, ಈ ಹಿನ್ನೆಲೆ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದ್ದು, ಬಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
![Police station](https://etvbharatimages.akamaized.net/etvbharat/prod-images/02:40_kn-mng-bantwal-01-police-photo-kac10019_03062020143511_0306f_1591175111_933.jpg)
ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಬಾಲಕನಿಗೆ ಸುಮಾರು ನಾಲ್ವರು ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆ ಥಳಿಸಿದ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೇ. 27 ರಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಮೇ. 28 ರಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 2 ರಂದು ಬಾಲಕಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಾಗಿದೆ.