ETV Bharat / state

ಬಾನ್ಸುರಿ, ವಯೋಲಿನ್, ಸ್ವರ ದಿಗ್ಗಜರಿಗೆ ಪ್ರಶಸ್ತಿ ಪ್ರದಾನ: 29ನೇ ಆಳ್ವಾಸ್ ವಿರಾಸತ್‍ಗೆ ತೆರೆ - ಆಳ್ವಾಸ್​ ವಿರಾಸತ್

ಮೂಡಬಿದರೆಯಲ್ಲಿ ನಡೆದ 29ನೇ ಆಳ್ವಾಸ್​ ವಿರಾಸತ್​ಗೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು.​

ಸ್ವರ ದಿಗ್ಗಜರಿಗೆ ಪ್ರಶಸ್ತಿ ಪ್ರದಾನ
ಸ್ವರ ದಿಗ್ಗಜರಿಗೆ ಪ್ರಶಸ್ತಿ ಪ್ರದಾನ
author img

By ETV Bharat Karnataka Team

Published : Dec 18, 2023, 10:34 AM IST

ಮಂಗಳೂರು: ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ, ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರಿಗೆ ಮೂಡಬಿದಿರೆಯಲ್ಲಿ ನಡೆದ 'ಆಳ್ವಾಸ್ ವಿರಾಸತ್-2023' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೂಡಬಿದಿರೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದ ವಿಶಾಲ ವೈಭವದ
ವೇದಿಕೆಯಲ್ಲಿ ಆಸೀನರಾದ ಮೂವರು ಸಾಧಕರಿಗೆ ಅವರದ್ದೇ ರಾಗ ಸಂಯೋಜನೆಯ ವಯೋಲಿನ್, ಬಾನ್ಸುರಿ ಹಾಗೂ ಸಂಗೀತದ (ಜೈ ಹೋ) ಮೂಲಕ ಅಭಿಮಾನದ ಪ್ರೀತಿಯನ್ನು ಧಾರೆ ಎರೆಯಲಾಯಿತು.

ಪ್ರಶಸ್ತಿ ಪಡೆದು ಮಾತನಾಡಿದ ಮೈಸೂರು ಮಂಜುನಾಥ, 'ಲೋಕದ ಸಮಸ್ತ ಸಂಭ್ರಮ ಮೂಡುಬಿದಿರೆಗೆ ಆಳ್ವರು ತಂದಿದ್ದಾರೆ. ದೇವೇಂದ್ರ ನಾಚುವ ಹಾಗೆ ವಿರಾಸತ್ ಭಾಸವಾಗುತ್ತಿದೆ. ಅವರು ಕೇವಲ ವೈಭವ ಸೃಷ್ಟಿಸಿಲ್ಲ. ಅದನ್ನು ಜನರಿಗೆ ಸಮರ್ಪಿಸಿ ಶ್ರೇಷ್ಠರಾಗಿದ್ದಾರೆ. ಮೂಡುಬಿದಿರೆ ಎಂಬ ಸಾಮಾನ್ಯ ಊರನ್ನು ವಿಶ್ವ ಭೂಪಟಕ್ಕೆ ಸೇರಿಸಿದ್ದಾರೆ' ಎಂದು ಹೇಳಿದರು.

ಕಲೆಗೆ ಗೌರವ ಹಾಗೂ ವೈಭವವನ್ನು ತಿಳಿಯಲು ಜಗತ್ತಿಗೆ ಇಂದು ಮೂಡುಬಿದಿರೆ ಮಾಪಕವಾಗಿದೆ. ಇಲ್ಲಿ ಪಾಲ್ಗೊಳ್ಳಲು ಬಯಸಿದ ಕಲಾವಿದರ ಸಂಖ್ಯೆ ಬಹು ದೊಡ್ಡದಿದೆ. ಇಲ್ಲಿ ಇಲ್ಲದಿರುವುದಾದರೂ ಏನು? ಕಲೆಯ ಮೂಲ ಉದ್ದೇಶವೇ ಸೌಂದರ್ಯ ಅರಿತು ಆಸ್ವಾದಿಸುವುದು. ಅದನ್ನು ಆಳ್ವರು ಮಾಡುತ್ತಿದ್ದು, ಇಲ್ಲಿ ನೂರಾರು ಕಲಾವಿದರು ಹುಟ್ಟಿಕೊಳ್ಳುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಆಳ್ವರ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ಸ್ವರ್ಗ ಲೋಕ ಸೃಷ್ಟಿಯಾಗಿದೆ. ಮನಸ್ಸು ಅರಳಿಸುವ ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಆಳ್ವರ ಪರಿಶ್ರಮದ ಫಲ ಇದು. ಆಳ್ವಾಸ್ ವಿರಾಸತ್ ಪ್ರಶಸ್ತಿ ಪದ್ಮಶ್ರೀಗೂ ಮಿಗಿಲು ಎಂದು ಬಣ್ಣಿಸಿದರು.

ಅತಿಥಿಗಳನ್ನು ಬರಮಾಡಿಕೊಂಡ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ವಿರಾಸತ್ ಕೇವಲ ಮನೋರಂಜನಾ ಕಾರ್ಯಕ್ರಮ ಅಲ್ಲ, ದೇಶದ ಕಲೆಯನ್ನು ಗೌರವಿಸುವ ಹಬ್ಬ. ನಾಡಿನಲ್ಲಿ ಕಲೆ ಗೌರವಿಸುವ ಸಂಘಟಕ ಹಾಗೂ ಸೌಂದರ್ಯ ಪ್ರಜ್ಞೆ ಇರುವ ಪ್ರೇಕ್ಷಕ ವರ್ಗ ಬೇಕು. ಕೃಷಿಕ, ಯೋಧ, ಕಲಾವಿದರನ್ನು ಗೌರವಿಸುವ ಆಳ್ವಾಸ್, ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ 7 ಮೇಳಗಳನ್ನು ಈ ಬಾರಿ ಸಂಘಟಿಸಿದೆ. ನಮ್ಮ ಮನೆಯ ಶ್ರೇಷ್ಠ ಕಲಾವಿದರನ್ನು ಗೌರವಿಸುತ್ತಿದ್ದೇವೆ ಎಂದು ಹೇಳಿದರು.

ಅದ್ಧೂರಿಯ 29ನೇಆಳ್ವಾಸ್ ವಿರಾಸತ್‍ಗೆ ತೆರೆ: ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ
ಅವರೋಹಣದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ '29ನೇ ವಿರಾಸತ್' ಗೆ ಭಾನುವಾರ ರಾತ್ರಿ ತೆರೆ ಬಿತ್ತು. ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.

ಇದಕ್ಕೂ ಮೊದಲು ಕಿರು ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆ ತರಲಾಯಿತು. ರಥಯಾತ್ರೆಯಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳ ಭಜನೆ ಹಾಡಿನ ಮೂಲಕ ಭಕ್ತಿ ಪ್ರಭಾವಳಿ ಮೂಡಿಸಿದರು. 15 ಜನ ಅರ್ಚಕರು ಮಂತ್ರ ಘೋಷ ಮಾಡಿದರು. ಹರಿದ್ವಾರದಿಂದ ಬಂದ ವಿಪುಲ್ ಶರ್ಮಾ ನೇತೃತ್ವದ ಗಂಗಾರತಿ ತಂಡವು ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಿದರು. ಈ ಮೂಲಕ ಆಳ್ವಾಸ್​ ವಿರಾಸತ್​ಗೆ ತೆರೆ ಎರಳೆಯಲಾಯಿತು.

ಇದನ್ನೂ ಓದಿ: ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಮನೆ-ಮನೆಗೆ ಆಮಂತ್ರಣ; ಬಿಜೆಪಿ ಅಭಿಯಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.