ETV Bharat / state

ಕಡಬ ಸಮುದಾಯ ಆರೋಗ್ಯ ಕೇಂದಕ್ಕೆ ಕುಕ್ಕೆ ದೇವಸ್ಥಾನದಿಂದ ಆಂಬ್ಯುಲೆನ್ಸ್​ ಕೊಡುಗೆ - ಆಂಬ್ಯುಲೆನ್ಸ್​ ಕೀ ಹಸ್ತಾಂತರಿಸಿದ ಸುಳ್ಯ ಶಾಸಕ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 5 ನೂತನ ಆಂಬ್ಯುಲೆನ್ಸ್​​ಗಳನ್ನು ನೀಡಲಾಗಿದೆ. ಈ ಪೈಕಿ ಒಂದು ಆಂಬ್ಯುಲೆನ್ಸ್​ಅನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ‌.

Ambulance Contribute
ಕಡಬ ಸಮುದಾಯ ಆಸ್ಪತ್ರೆಗೆ ಆಂಬ್ಯುಲೆನ್ಸ್​ ಕೊಡುಗೆ: ಕೀ ಹಸ್ತಾಂತರಿಸಿದ ಸುಳ್ಯ ಶಾಸಕ
author img

By

Published : Jan 2, 2021, 4:51 PM IST

ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 14.5 ಲಕ್ಷ ರೂ. ಬೆಲೆಯ ಆಂಬ್ಯುಲೆನ್ಸ್​ಗಳನ್ನು ಸುಳ್ಯ ಶಾಸಕ ಎಸ್.ಅಂಗಾರ ಶನಿವಾರ ಹಸ್ತಾಂತರಿಸಿದರು.

ಕಡಬ ಸಮುದಾಯ ಆಸ್ಪತ್ರೆಗೆ ಆಂಬ್ಯುಲೆನ್ಸ್​ ಕೊಡುಗೆ: ಕೀ ಹಸ್ತಾಂತರಿಸಿದ ಸುಳ್ಯ ಶಾಸಕ

ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 5 ನೂತನ ಆಂಬ್ಯುಲೆನ್ಸ್​​ಗಳನ್ನು ನೀಡಲಾಗಿದೆ. ಈ ಪೈಕಿ ಒಂದು ಆಂಬ್ಯುಲೆನ್ಸ್​ಅನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ‌. ನೂತನ ಆಂಬ್ಯುಲೆನ್ಸ್​ ಕೀಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ಅವರಿಗೆ ಶಾಸಕ ಎಸ್. ಅಂಗಾರ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು, ಅಗತ್ಯ ಬೇಡಿಕೆಯಾಗಿದ್ದ ಆಂಬ್ಯುಲೆನ್ಸ್ಅ​ನ್ನು ಈಗಾಗಲೇ ಆಸ್ಪತ್ರೆಗೆ ನೀಡಲಾಗಿದೆ. ಇನ್ನುಳಿದಂತೆ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರವನ್ನು ವಿಶೇಷ ಆದ್ಯತೆಯ ಮೇರೆಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.

ಕಡಬದ ಸರ್ಕಾರಿ ಆಸ್ಪತ್ರೆಯಲ್ಲಿ ಈಗಾಗಲೇ ಆರಂಭವಾದ ಹಲವಾರು ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಯ ಎಂಜಿನಿಯರ್​​ಗಳನ್ನು ಕರೆಸಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ತಿಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿಪಂ ಸದಸ್ಯ ಪಿ.ಪಿ.ವರ್ಗೀಸ್, ಪ್ರಮುಖರಾದ ಕೃಷ್ಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.