ETV Bharat / state

ಇಂದು ಮಂಗಳೂರಿಗೆ ಅಮಿತ್​ ಶಾ; ಬಿಜೆಪಿ 'ಚಾಣಕ್ಯ'ನ ಕಾರ್ಯಕ್ರಮದ ಪಟ್ಟಿ ಹೀಗಿದೆ - etv bharat kannada

ಇಂದು ದಕ್ಷಿಣ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ- ಜಿಲ್ಲೆಯಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ವ್ಯವಸ್ಥೆ- ಶಾ ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ

Amit Shah
ಇಂದು ಮಂಗಳೂರಿಗೆ ಅಮಿತ್​ ಶಾ
author img

By

Published : Feb 11, 2023, 9:56 AM IST

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.15 ಕ್ಕೆ ತಲುಪಲಿದ್ದು, ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ 2.20ರ ವೇಳೆಗೆ ಹೆಲಿಕಾಪ್ಟರ್​ ಮೂಲಕ ಪುತ್ತೂರಿನ ಈಶ್ವರಮಂಗಲದ ಕಡೆಗೆ ಪ್ರಯಾಣಿಸಲಿದ್ದಾರೆ.

ಶಾ ಭಾಗಿಯಾಗಲಿರುವ ಕಾರ್ಯಕ್ರಮಗಳು: ಅಮಿತ್​ ಶಾ ಅವರು ಮಧ್ಯಾಹ್ನ 2.45 ಕ್ಕೆ ಹೆಲಿಕಾಪ್ಟರ್​ ಮೂಲಕ ಈಶ್ವರಮಂಗಲದಲ್ಲಿರುವ ಹೆಲಿಪ್ಯಾಡ್​ನಲ್ಲಿ‌ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಈಶ್ವರಮಂಗಲದಲ್ಲಿರುವ ಹನುಮಗಿರಿ ದೇವಸ್ಥಾನಕ್ಕೆ ತೆರಳಲಿದ್ದಾರೆ. ಅಲ್ಲಿ ಈಗಾಗಲೇ ಸಿದ್ಧಗೊಂಡಿರುವ ಭಾರತ ಮಾತಾ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 3.20ಕ್ಕೆ ಹೆಲಿಕಾಪ್ಟರ್​ ಮೂಲಕ ಪುತ್ತೂರಿಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣ ತಲುಪಿ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ನಾಳೆ ಮಂಗಳೂರಿಗೆ ಅಮಿತ್​ ಶಾ; ಕೇಂದ್ರ ಗೃಹ ಸಚಿವರ ರೋಡ್​ ಶೋ ರದ್ದು, ಕೋರ್​ ಕಮಿಟಿ ಸಭೆ ಮಾತ್ರ

ಬಿಜೆಪಿ ಕೋರ್​ ಕಮಿಟಿ ಸಭೆ: ಅಲ್ಲಿಂದ ಪುತ್ತೂರು ಹೆಲಿಪ್ಯಾಡ್​ಗೆ ಬಂದು ಹೆಲಿಕಾಪ್ಟರ್​ ಮೂಲಕ ಸಂಜೆ 5.05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಬಳಿಕ ಕೆಂಜಾರುವಿನಲ್ಲಿ ಕಾರ್ಯಕರ್ತರಿಗೆ ಶುಭಕೋರಿ 5.20ಕ್ಕೆ ಕೆಂಜಾರುವಿನಲ್ಲಿರುವ ಶ್ರೀ ದೇವಿ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಶಿಕ್ಷಣ ಸಂಸ್ಥೆಯ ಸೆಮಿನಾರ್ ಸಭಾಂಗಣದಲ್ಲಿ ಆರು ಜಿಲ್ಲೆಗಳ ಬಿಜೆಪಿ ಮುಖಂಡರ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಆ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಪೊಲೀಸ್​ ಬಿಗಿ ಬಂದೋಬಸ್ತ್​: ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಪುತ್ತೂರಿನಲ್ಲಿ 11 ಕೆಎಸ್ಆರ್​ಪಿ ಸೇರಿದಂತೆ 1,000 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ ವಿವಿಧ ಜಿಲ್ಲೆಗಳ ಎಸ್​ಪಿ, ಡಿವೈಎಸ್​ಪಿಗಳು ಮತ್ತು ಇನ್​ಸ್ಪೆಕ್ಟರ್​ಗಳನ್ನು ನಿಯೋಜನೆ ಮಾಡಲಾಗಿದೆ. ಮಂಗಳೂರಿನಲ್ಲೂ ಅಮಿತ್ ಶಾ ಅವರು ಬರುವ ಸ್ಥಳದ ಒಂದೆರಡು ಕಿ.ಮೀ. ವ್ಯಾಪ್ತಿಯಲ್ಲಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದ್ದು, ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ: ಮೊದಲು ನಿರ್ಧರಿಸಿದಂತೆ ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ಬಳಿಕ ಅಮಿತ್​ ಶಾ ಅವರು ಕ್ಯಾಂಪ್ಕೋ ಫ್ಯಾಕ್ಟರಿ ವೀಕ್ಷಣೆ ಮಾಡುವವರಿದ್ದರು. ಆದರೆ ಅದನ್ನು ರದ್ದುಪಡಿಸಲಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ನೇರವಾಗಿ ಹೆಲಿಕಾಪ್ಟರ್ ಮೂಲಕ ಅವರು ಮಂಗಳೂರಿಗೆ ಬರಲಿದ್ದಾರೆ. ಈ ಕಾರಣದಿಂದ 5.05 ಕ್ಕೆ ಅಮಿತ್​ ಶಾ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ.

ಇದನ್ನೂ ಓದಿ: ರೈತರಿಂದ ಜಿಡಿಪಿಗೆ ಶೇ.18 ಕೊಡುಗೆ, ಅನ್ನದಾತರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.