ಕಡಬ (ದಕ್ಷಿಣ ಕನ್ನಡ): ಮಂಗಳೂರಿಗೆ ಹೋಗುವುದಾಗಿ ಹೇಳಿ ಆಶಾ ಕಾರ್ಯಕರ್ತೆಯೊಬ್ಬರು ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಐತೂರು ಗ್ರಾಮದ ಪಂಚಾಯತ್ ವ್ಯಾಪ್ತಿಯ ಮಟ್ಟತ್ತಿಲ್ ಎಂಬಲ್ಲಿ ನಡೆದಿದೆ.
ಕೆ.ಅನೂಪ್ ಎಂಬುವವರ ಪತ್ನಿ ನಾಪತ್ತೆಯಾಗಿದ್ದು, ಜೂನ್ 8ರಂದು ಗರ್ಭಿಣಿಯೊಬ್ಬರನ್ನು ಹೆರಿಗೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಬೇಕು ಎಂದು ಹೇಳಿ ನಾಪತ್ತೆಯಾಗಿದ್ದಾರೆ. ಆಟೋ ರಿಕ್ಷಾದಲ್ಲಿ ಬಾಡಿಗೆ ತೆಗೆದುಕೊಂಡು ಕಡಬ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾಗಿ ಮಾಹಿತಿ ಲಭಿಸಿದೆ.
ಸಂಜೆಯಾದರೂ ಪತ್ನಿ ಮನೆಗೆ ಬಾರದೇ ಇದ್ದುದರಿಂದ ಅನೂಪ್, ಅವರು ಸಂಬಂಧಿಕರ ಮತ್ತು ಪರಿಚಯಸ್ಥರ ಬಳಿ ವಿಚಾರಿಸಿದರೂ ಮಹಿಳೆ ಪತ್ತೆಯಾಗದ ಕಾರಣ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.