ಬೆಳ್ತಂಗಡಿ: ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗದಲ್ಲಿ ಮೂಡಿಗೆರೆಯ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಂಚಿತಾ ಡಿ. ಜೈನ್ ದೆಹಲಿಯ ರಾಜಪಥ್ನಲ್ಲಿ ಜರುಗಿದ ಗಣರಾಜ್ಯೋತ್ಸವದ ಪರೇಡ್ನಲ್ಲಿ ಭಾಗವಹಿಸಿದ್ದರು.
ಅಂಚಿತಾ, ಜ. 24ರಂದು ನಡೆದ ಪೂರ್ವಭಾವಿ ಪರೇಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಕಿರಣ್ ರಿಜು, ಅರ್ಜುನ್ ಮುಂಡಾ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ ಯಕ್ಷಗಾನ ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.
ಈ ಮೂಲಕ ಬೆಳ್ತಂಗಡಿ ತಾಲೂಕಿಗೆ ಹಾಗೂ ಹೆತ್ತವರಿಗೆ ಮತ್ತು ವಿದ್ಯಾ ಸಂಸ್ಥೆಗೆ ಅಂಚಿತಾ ಕೀರ್ತಿ ತಂದಿದ್ದಾರೆ.