ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟಿದೆ.
ಬಂಟ್ವಾಳದಲ್ಲಿ ಮೃತಪಟ್ಟ ಮಹಿಳೆಯ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಅವರ ಸಂಪರ್ಕದಿಂದ ಇದೀಗ 33 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಒಟ್ಟು 12 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಬಂಟ್ವಾಳದಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿದ್ದು, ಪೇಟೆಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.