ETV Bharat / state

ದಕ್ಷಿಣ ಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಪುತ್ರಿ ಗುಣಮುಖ - Coronavirus majorly affected cities

ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ದೃಢಗೊಂಡು ಚಿಕಿತ್ಸೆ ಪಡೆಯುತ್ತಿದ್ದ 15 ಮಂದಿಯಲ್ಲಿ ಒಬ್ಬರು ಗುಣಮುಖರಾಗಿದ್ದು ಇನ್ನೂ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Coronavirus majorly affected cities
ಕೊರೊನಾದಿಂದ ಮೃತಪಟ್ಟ ಮಹಿಳೆಯ ಪುತ್ರಿ ಗುಣಮುಖ
author img

By

Published : May 11, 2020, 7:42 PM IST

ಮಂಗಳೂರು : ದ.ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಖಚಿತಗೊಂಡು ಚಿಕಿತ್ಸೆ ಪಡೆಯುತ್ತಿದ್ದ 15 ಮಂದಿಯಲ್ಲಿ ಒಬ್ಬರು ಗುಣಮುಖರಾಗಿದ್ದು ಇನ್ನೂ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Coronavirus majorly affected cities
ಕೊರೊನಾದಿಂದ ಮೃತಪಟ್ಟ ಮಹಿಳೆಯ ಪುತ್ರಿ ಗುಣಮುಖ

ಕೊರೊನಾದಿಂದ ಮೃತಪಟ್ಟ ಬಂಟ್ವಾಳ ಕಸಬಾದ ಮಹಿಳೆಯ ಪುತ್ರಿಗೆ ಕೊರೊನಾ ಹಿನ್ನೆಲೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 68 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 128 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಕಳುಹಿಸಲಾದ 124 ಮಂದಿಯ ಗಂಟಲು ದ್ರವದ ವರದಿ ನೆಗೆಟಿವ್ ಬಂದಿದೆ.

ಈ ವರೆಗೆ 4,270 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 31 ಪಾಸಿಟಿವ್ ಮತ್ತು 4,239 ನೆಗೆಟಿವ್ ಬಂದಿದೆ. ಇಂದು 48 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈ ವರೆಗೆ ಒಟ್ಟು 40,574 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಇಎಸ್ಐ ಆಸ್ಪತ್ರೆಯಲ್ಲಿ 24 ಮಂದಿ, ಎನ್​ಐಟಿಕೆಯಲ್ಲಿ 20 ಮಂದಿ ಕ್ವಾರಂಟೈನ್​ನಲ್ಲಿದ್ದಾರೆ. ಇಂದಿಗೆ 6,073 ಮಂದಿ 28 ದಿನದ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿದ್ದ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 14 ಮಂದಿಯಲ್ಲಿ ಬೋಳೂರು ನಿವಾಸಿ 58 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.