ಬೆಳ್ತಂಗಡಿ: ಸಂವಿಧಾನ 347ನೇ ವಿಧಿ ಅನ್ವಯ ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಶಾಸಕ ಹರೀಶ್ ಪೂಂಜರಿಗೆ ತುಳು ಅಕಾಡಮಿ ಮನವಿ ಮಾಡಿದೆ.
ಈ ಕುರಿತು ಸ್ಪಂದಿಸಿದ ಶಾಸಕ ಹರೀಶ್ ಪೂಂಜ, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗಾಗಿ ತುಳು ಲಿಪಿ ಕಲಿಕಾ ತರಬೇತಿಗೆ ಚಾಲನೆ ನೀಡುವ ಮೂಲಕ ತುಳು ಲಿಪಿಯನ್ನು 8 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಸರ್ವ ಪ್ರಯತ್ನವನ್ನು ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತುಳು ಅಕಾಡಮಿಯ ಅಧ್ಯಕ್ಷರಾದ ದಯಾನಂದ್ ಕತ್ತಲ್ ಸಾರ್, ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕರಾದ ಶಶಿ ರೈ ಬಂಡಿಮಾರ್, ಜೈ ತುಳುನಾಡ್ ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್, ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ ಇತರರು ಉಪಸ್ಥಿತರಿದ್ದರು.