ETV Bharat / state

ದ.ಕನ್ನಡದಲ್ಲಿ ಅಂಗಡಿಗಳ ಬಂದ್​ಗೆ ಆದೇಶ:​​​​​​​​​​​ ಬೆಳ್ಳಾರೆ, ಸುಬ್ರಮಣ್ಯ ಠಾಣೆಗಳ ಪಿಎಸ್​ಐ ಎತ್ತಂಗಡಿ

ಪ್ರವೀಣ್​ ನೆಟ್ಟಾರು ಮೃತದೇಹ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ, ಆರ್​ಎಸ್​ಎಸ್​ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು. ಹೀಗಾಗಿ ಈ ಎರಡು ಠಾಣೆ ಪಿಎಸ್ಐಗಳ ಅಮಾನತುಗೊಳಿಸಬೇಕು ಎಂದು ಕೂಗು ಕೇಳಿ ಬಂದಿತ್ತು. ಇದರ ಬೆನ್ನಲೇ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗ್ತಿದೆ.

ಬೆಳ್ಳಾರೆ, ಸುಬ್ರಮಣ್ಯ ಪೊಲೀಸ್ ಠಾಣೆ
ಬೆಳ್ಳಾರೆ, ಸುಬ್ರಮಣ್ಯ ಪೊಲೀಸ್ ಠಾಣೆ
author img

By

Published : Jul 29, 2022, 3:51 PM IST

Updated : Jul 29, 2022, 5:16 PM IST

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ವಿಫಲವಾಗಿದ್ದರು ಎನ್ನಲಾದ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯಕ್ ಮತ್ತು ಕುಕ್ಕೆ ಸುಬ್ರಹ್ಮಣ್ಯ ಪಿಎಸ್ಐ ಜಂಬೂರಾಜ್ ಮಹಾಜನ್ ಅವರಿಗೆ ತಲೆದಂಡವಾಗಿದೆ ಎನ್ನಲಾಗಿದೆ. ಸುಬ್ರಹ್ಮಣ್ಯ ಮತ್ತು ಬೆಳ್ಳಾರೆ ಠಾಣೆಗಳಿಗೆ ಹೊಸ ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವಿಟ್ಲ ಠಾಣೆಯ ಪಿಎಸ್ಐ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಮತ್ತು ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್ ಅವರನ್ನು ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ, ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ.

ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್​ಎಸ್​ಎಸ್​ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು. ಈ ಹಿನ್ನೆಲೆ ಬಂದೋಬಸ್ತ್​​ನಲ್ಲಿದ ಬೆಳ್ಳಾರೆ ಠಾಣೆ ಮತ್ತು ಸುಬ್ರಹ್ಮಣ್ಯ ಪಿಎಸ್​​ಐ ಹಾಗೂ ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು.

ಅಂಗಡಿಗಳ ಬಂದ್​ ಮಾಡುವಂತೆ ಡಿಸಿ ಆದೇಶ

ಇದೀಗ ಅವರನ್ನು ಅಮಾನತುಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ಇಬ್ಬರು ಪಿಎಸ್ಐಗಳ ತಲೆದಂಡವಾಗಿದೆ ಎನ್ನಲಾಗಿದೆ. ಆದರೆ, ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗೂ ಕುಕ್ಕೆ ಸುಬ್ರಮಣ್ಯ ಠಾಣಾಧಿಕಾರಿ ಜಂಬೂರಾಜ್ ಮಹಾಜನ್​ರನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ.

ಅಂಗಡಿಗಳ ಬಂದ್​ ಮಾಡುವಂತೆ ಡಿಸಿ ಆದೇಶ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತು ದಿನದಲ್ಲಿ ಮೂರು ಕೊಲೆ ನಡೆದಿರುವ ಹಿನ್ನೆಲೆ ಶುಕ್ರವಾರ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ.

ಆದೇಶ ಪ್ರತಿ
ಆದೇಶ ಪ್ರತಿ

ಇದನ್ನೂ ಓದಿ: Breaking news... ಪ್ರವೀಣ್​ ಹತ್ಯೆ ಪ್ರಕರಣ ಎನ್​ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಇಂದು ಸಂಜೆಯಿಂದ ಆಗಸ್ಟ್​ 1 ರ ತನಕ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ತುರ್ತು ಸೇವೆಗಳು, ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್​ಗಳಿಗೆ ಈ ಆದೇಶದಿಂದ ವಿನಾಯಿತಿ ಇದ್ದು, ಅವುಗಳು ಕಾರ್ಯನಿರ್ವಹಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Last Updated : Jul 29, 2022, 5:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.