ETV Bharat / state

ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಆರಗ ಜ್ಞಾನೇಂದ್ರ ಹೇಳಿಕೆ : ರೈತ ಸಂಘಟನೆಗಳಿಂದ ಪ್ರತಿಭಟನೆ - ETv Bharat Kannada news

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ ಎಂದಿದ್ದ ಆರಗ ಜ್ಞಾನೇಂದ್ರ- ಸಚಿವರ ಹೇಳಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಬ್ಲಾಕ್ ಕಾಂಗ್ರೆಸ್ ಮತ್ತು ಬ್ಲಾಕ್ ಕಿಸಾನ್ ಕಾಂಗ್ರೆಸ್ ನಿಂದ ಪ್ರತ್ಯೇಕ ಪ್ರತಿಭಟನೆ

Karnataka State Farmers Union Green Sena protest
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಪ್ರತಿಭಟನೆ
author img

By

Published : Jan 2, 2023, 9:45 PM IST

ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಆರಗ ಜ್ಞಾನೇಂದ್ರ ಹೇಳಿಕೆ : ರೈತ ಸಂಘಟನೆಯ ಪ್ರತಿಭಟನೆಗೆ ಕಾಂಗ್ರೆಸ್​ ಸಾಥ್​

ಪುತ್ತೂರು (ದಕ್ಷಿಣ ಕನ್ನಡ) : ಇತ್ತೀಚೆಗೆ ಬೆಳಗಾವಿಯ ಸುವಣ್ಣಸೌಧದಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗೆ ಭವಿಷ್ಯವಿಲ್ಲ, ಅಡಿಕೆ ಬೆಳೆಗಾರರು ಬೀದಿ ಪಾಲಾಗುತ್ತಾರೆ ಎಂಬ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಆರೋಪಿಸಿದೆ.

ಇದರ ಬೆನ್ನಲ್ಲೇ ಆರಗ ಜ್ಞಾನೇಂದ್ರ ಅವರನ್ನು ತತ್‌ಕ್ಷಣವೇ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಜ.2ರಂದು ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲೆಯಲ್ಲಿ ಮೊದಲಿಂದಲೂ ಅಡಿಕೆಗೆ ಮೊದಲ ಪ್ರಾಶಸ್ತ್ಯ ನೀಡಿ ಅದನ್ನು ಸಾಂಪ್ರದಾಯಿಕ ಬೆಳೆಯಾಗಿ ಶತಮಾನಗಳಿಂದಲೂ ಬೆಳೆಯಲಾಗುತ್ತಿದೆ. ಈ ರೀತಿಯ ವಾತಾವರಣದಲ್ಲಿರುವ ಅಡಿಕೆ ಬೆಳಗಾರರಿಗೆ ಸಚಿವ ಆರಗ ಜ್ಞಾನೇಂದ್ರ ಅವರು ಅಧಿವೇಶನದಲ್ಲಿ ನೀಡಿರುವ ಹೇಳಿಕೆ ಸರಿ ಇಲ್ಲ ಎಂದು ಅಕ್ರೋಶ ಹೊರಹಾಕಿದ್ದಾರೆ.

Block Congress and Block Kisan Congress protest
ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ : ಈ ಎರಡರ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರ ಈ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನೆಯನ್ನು ಅಮರ್ ಜವಾನ್ ಸ್ಮಾರಕದ ಬಳಿ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು, ಅಡಿಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲರ ಭವಿಷ್ಯಕ್ಕೂ ಮಾರಕವಾಗಿದೆ. ಪ್ರಸ್ತುತ ಅಡಕೆಗೆ ಬಂದಿರುವ ಹಳದಿ ರೋಗ, ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳುವ ಯಾವುದೇ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ. ಈ ಖಂಡನೀಯ ಹೇಳಿಕೆ ಕುರಿತು ಕಾಂಗ್ರೆಸ್ ಗ್ರಾಮ ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಿದೆ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪರ ಸರ್ಕಾರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಮಾತನಾಡಿ, ದೇಶದ ಪ್ರಗತಿಯಲ್ಲಿ ಕೃಷಿಕರ ಪಾತ್ರ ಮಹತ್ತರವಾದದ್ದು. ಹೀಗಿದ್ದರೂ ಅಡಕೆ ಕುರಿತು ಇಲ್ಲದ ಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ರೈತರನ್ನು ತುಳಿಯುವ ಕೆಲಸ ಬಿಜೆಪಿ ಸರ್ಕಾರದಿಂದ ಆಗುತ್ತಿದೆ. ಇನ್ನೊಂದೆಡೆ ಆಮದು ನೀತಿಯಿಂದಾಗಿ ಅಡಕೆ ದರ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ಆಮದು ನಿಲ್ಲಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿ ಎಂದು ಒತ್ತಾಯಿಸಿದರು.

ಬಳಿಕ ಮತ್ತೊಬ್ಬ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಅವರು ಮಾತನಾಡಿ, ಆಡಳಿತದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಎಲ್ಲಾ ಅಡಕೆ ರೈತರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲದಂತೆ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು. ಕೃಷಿಕರಿಗೆ ಭೂಮಿ ಒಡೆತನ ನೀಡಿದ್ದು ಕಾಂಗ್ರೆಸ್, ಉಚಿತ ವಿದ್ಯುತ್ ನೀಡಿದ್ದು ಕಾಂಗ್ರೆಸ್. ಇದರಿಂದ ಬಿಜೆಪಿಯವರು ಇಂದು ಬದುಕುತ್ತಿದ್ದಾರೆ ಎಂದು ಟೀಕಿಸಿದರು.

ಘಟನೆ ಹಿನ್ನೆಲೆ : ವಿಧಾನ ಸಭೆಯಲ್ಲಿ ನಿಯಮ 69ರ ಅಡಿ ಸಾರ್ವಜನಿಕ ಜರೂರಿನ ವಿಷಯದ ಚರ್ಚೆ ನಡೆಯುವ ವೇಳೆ ಹೆಚ್​.ಎಂ.ರೇವಣ್ಣ ಅಡಿಕೆ ಬೆಳೆ ವಿಷಯವನ್ನು ಮಾತನಾಡುವಾಗ ಮಧ್ಯಪ್ರವೇಶಿಸಿದ್ದ ಸಚಿವ ಆರಗ ಜ್ಞಾನೇಂದ್ರ, ನಾವೆಲ್ಲ ಸಾಂಪ್ರದಾಯಿಕ ಅಡಿಕೆ ಬೆಳೆಗಾರರು, ಈ ಅಡಿಕೆ ಬೆಳೆಗೆ ಭವಿಷ್ಯ ಬಹಳ ದಿನ ಇರುವುದಿಲ್ಲ. ಹಾಗಾಗಿ ಇದಕ್ಕೆ ಪ್ರೋತ್ಸಾಹ ಕೊಡಬಾರದು. ಕೇಂದ್ರ ಸರ್ಕಾರ ಈಗಾಲೇ ಬಯಲು ಸೀಮೆ ಕಡೆ ಡ್ರಿಪ್​ ಇರಿಗೇಷನ್​ ಅನ್ನು ತೆಗೆದು ಹಾಕಿದೆ. ಅಡಿಕೆ ಜಾಸ್ತಿ ಬೆಳೆಯುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಭವಿಷ್ಯದಲ್ಲಿ ಇದು ಮಾರಕವಾಗುತ್ತದೆ. ರೈತರಿಗೆ ಇದನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು.

ಮೊದಲೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಗಿಂತಳೂ ಹೆಚ್ಚು​ ಅಡಿಕೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬಿ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಬೇಜವಾಬ್ದಾರಿ ಹೇಳಿಕೆಯಿಂದ ಅಡಿಕೆ ಧಾರಣೆ ಕುಸಿಯುವ ಸಾಧ್ಯತೆಯಿದ್ದು, ಈ ಹೇಳಿಕೆಯಿಂದ ರೈತರಿಗೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆರಗ ಜ್ಞಾನೇಂದ್ರ ಅವರ ಈ ತರಹದ ಹೇಳಿಕೆಗಳು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತಿವೆ ಎಂದು ರೈತ ಸಂಘ ಆರೋಪಿಸಿದೆ.

ಇದನ್ನೂ ಓದಿ : ಅಡಿಕೆ ಬೆಳೆ ಭವಿಷ್ಯ ಬಹಳ ದಿ‌ನ‌ ಇರಲ್ಲ, ಇದು ರೈತರಿಗೆ ಮಾರಕವಾಗಲಿದೆ: ಸಚಿವ ಆರಗ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.