ಪುತ್ತೂರು: ಕೊರೊನಾ ಪ್ರಮಾಣ ಹೆಚ್ಚುತ್ತಿರುವ ಕಾರಣ ಸರ್ಕಾರ ಅನಿವಾರ್ಯವಾಗಿ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾಗಿ ಬಂದಿದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅರಣ್ಯ ಖಾತೆಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ಉಂಟಾಗುತ್ತಿರುವುದು ನಿಜ. ಈ ಸಮಸ್ಯೆ ನೀಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹೆಚ್ಚುವರಿ ಪ್ರಮಾಣದಲ್ಲಿ ಆಕ್ಸಿಜನ್ ನೀಡುವಂತೆ ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಜಿಂದಾಲ್ ಸೇರಿದಂತೆ ನಾನಾ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದ್ದು, ಆಕ್ಸಿಜನ್ ನೀಡುವಂತೆ ತಿಳಿಸಲಾಗಿದೆ. ಸಚಿವ ಜಗದೀಶ್ ಶೆಟ್ಟರ್ ಈ ಬಗ್ಗೆ ಕಂಪನಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದರು.