ETV Bharat / state

ಮಂಗಳೂರು: ನಕಲಿ ದಾಖಲೆ ಪತ್ರ ತಯಾರಿಸಿ ಮಾರಾಟ; ಆರೋಪಿ ಬಂಧನ - ಈಟಿವಿ ಭಾರತ ಕನ್ನಡ

ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Arrest of a person making fake documents and selling them illegally for money
ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನ ಬಂಧನ
author img

By ETV Bharat Karnataka Team

Published : Oct 6, 2023, 10:24 PM IST

Updated : Oct 6, 2023, 10:51 PM IST

ಮಂಗಳೂರು (ದಕ್ಷಿಣ ಕನ್ನಡ): ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ನಗರದ ಬಜ್ಜೋಡಿ ಬಿರ್ಕನಕಟ್ಟೆ ಬರ್ನಾಡ್ ರೋಶನ್ ಮೆಸ್ಕರೆನಸ್ (41) ಬಂಧಿತ ವ್ಯಕ್ತಿ.

ಈತ ಮಂಗಳೂರು ನಗರದ ಕಂಕನಾಡಿ - ಪಂಪ್​ವೆಲ್​ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್ ಕ್ರೌನ್ ಅಪಾರ್ಟ್​ಮೆಂಟ್​ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ 'ಹೆಲ್ಪ್ ಲೈನ್ ಮಂಗಳೂರು' ಎಂಬ ಹೆಸರಿನ ಸಂಸ್ಥೆಯನ್ನು ಇಟ್ಟುಕೊಂಡಿದ್ದ. ಇಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ (ರೇಷನ್ ಕಾರ್ಡ್), ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸುತ್ತಿದ್ದ.

ಅವುಗಳನ್ನು ಬಳಸಿಕೊಂಡು ಇತರೆ ದಾಖಲಾತಿಗಳನ್ನು ಮಾಡಿಕೊಟ್ಟು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ. ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ರೋಶನ್ ಮೆಸ್ಕರೆನಸ್​ನನ್ನು ಬಂಧಿಸಿದ್ದಾರೆ. ಈತ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್ ಕಾರ್ಡ್​ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಗಿ ಪತ್ರ, ನಕಲಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಮೂರು ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್​ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿ ಸರಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆರೋಪಿ ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್​ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಷಿನ್​, ಬಯೋ ಮೆಟ್ರಿಕ್ ಡಿವೈಸ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಕಲಿ ದಾಖಲೆ ಪತ್ರ ತಯಾರಿಸುವ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರು: ಮಾಲೀಕನಿಂದ ಹಣ ಸುಲಿಗೆಗೆ ಕಿಡ್ನಾಪ್ ಪ್ರಹಸನ; ಕಾರ್ಮಿಕ ಸೇರಿ ಮೂವರ ಬಂಧನ

ಸಿಮ್ ಕಾರ್ಡ್ ಬ್ಲಾಕ್ ಮಾಡಿ ವಂಚನೆ: ನಕಲಿ ಪ್ರತಿ (ಜೆರಾಕ್ಸ್‌) ಅಂಗಡಿ ಮಾಲೀಕರ ಸಿಮ್ ಕಾರ್ಡ್ ಬ್ಲಾಕ್ ಮಾಡಿಸಿದ್ದ ಸೈಬರ್ ವಂಚಕರು, ನಕಲಿ ದಾಖಲೆಗಳ ಮೂಲಕ ಅವರ ಬ್ಯಾಂಕ್ ಖಾತೆಯಲ್ಲಿದ್ದ 2 ಲಕ್ಷ ರೂಪಾಯಿ ಹಣ ಡ್ರಾ ಮಾಡಿಕೊಂಡು ವಂಚಿಸಿರುವ ಬಗ್ಗೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು. ಶಿವಕುಮಾರ್ ಎಂಬವರು ಹಣ ಕಳೆದುಕೊಂಡಿದ್ದರು.

ವಿವರ: ಚಿಕ್ಕಸಂದ್ರದ ನಿವಾಸಿ ಶಿವಕುಮಾರ್ ಜೆರಾಕ್ಸ್ ಅಂಗಡಿ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ಅವರ ಮೊಬೈಲ್ ನೆಟ್‌ವರ್ಕ್ ದಿಢೀರ್ ಬಂದ್ ಆಗಿತ್ತು. ಮೊಬೈಲ್ ಸರ್ವಿಸ್ ಪ್ರೊವೈಡರ್ ಕಂಪನಿಗೆ ಕರೆ ಮಾಡಿ ವಿಚಾರಿಸಿದ್ದರು. ಈ ವೇಳೆ ಹಳೆಯ ಸಿಮ್‌ಕಾರ್ಡ್ ಬ್ಲಾಕ್ ಆಗಿದ್ದು, ಹೊಸ ಸಿಮ್‌ ಕಾರ್ಡ್ ಖರೀದಿಸುವಂತೆ ಸೂಚಿಸಿದ್ದರು. ಅದರಂತೆ ಹೊಸ ಸಿಮ್ ಕಾರ್ಡ್ ಖರೀದಿಸಿ ಅದನ್ನು ಮೊಬೈಲ್‌ಗೆ ಹಾಕುತ್ತಿದ್ದಂತೆಯೇ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ 2 ಲಕ್ಷ ಹಣ ಡ್ರಾ ಆಗಿರುವ ಕುರಿತು ಸಂದೇಶ ಬಂದಿದೆ. ಈ ಬಗ್ಗೆ ಶಿವಕುಮಾರ್ ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಅಪರಿಚಿತರು ಮೊಬೈಲ್ ಸಂಖ್ಯೆ ಬಳಸಿ ಹಣ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಶಿವಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Last Updated : Oct 6, 2023, 10:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.